ಪಾಕ್ ಐಎಸ್‌ಐಗೆ ಹೊಸ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಅಸೀಮ್ ಮುನೀರ್ ನೇಮಕ

0
377

ಪಾಕಿಸ್ತಾನದ ಪ್ರಬಲ ಗೂಢಚಾರ ಸಂಸ್ಥೆ ಇಂಟರ್ ಸರ್ವಿಸ್ ಇಂಟೆಲಿಜೆನ್ಸ್‌ (ಐಎಸ್‌ಐ) ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಅಸೀಮ್ ಮುನೀರ್ ಅಕ್ಟೋಬರ್ 10 ರ ಬುಧವಾರ ನೇಮಕಗೊಂಡಿದ್ದಾರೆ.

ಇಸ್ಲಾಮಾಬಾದ್ (ಪಿಟಿಐ): ಪಾಕಿಸ್ತಾನದ ಪ್ರಬಲ ಗೂಢಚಾರ ಸಂಸ್ಥೆ ಇಂಟರ್ ಸರ್ವಿಸ್ ಇಂಟೆಲಿಜೆನ್ಸ್‌ (ಐಎಸ್‌ಐ) ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಅಸೀಮ್ ಮುನೀರ್ ಅಕ್ಟೋಬರ್ 10 ರ ಬುಧವಾರ ನೇಮಕಗೊಂಡಿದ್ದಾರೆ.

2016ರ ಡಿಸೆಂಬರ್‌ನಲ್ಲಿ ಐಎಸ್‌ಐನ ಮಹಾ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದ ನವೀದ್ ಮುಖ್ತಾರ್ ಅವರಿಂದ ತೆರವಾದ ಸ್ಥಾನಕ್ಕೆ ಮುನೀರ್ ನೇಮಕಗೊಂಡಿದ್ದಾರೆ ಎಂದು ಪಾಕ್ ಸೇನೆಯ ಮಾಧ್ಯಮ ವಿಭಾಗ ತಿಳಿಸಿದೆ.