ಪೊಲೀಸ್ ಪೇದೆ ನೇಮಕಾತಿ ಲಿಖಿತ ಪರೀಕ್ಷೆ ಮುಂದೂಡಿಕೆ( KARNATAKA POLICE CONSTABLE EXAM POSTPONED)

0
54

ಪೊಲೀಸ್ ಕಾನ್ಸ್​ಟೆಬಲ್ ಹುದ್ದೆಗಳ ನೇಮಕಾತಿಗೆ ಆಗಸ್ಟ್ 19ರಂದು ನಿಗದಿಪಡಿಸಿದ್ದ ಲಿಖಿತ ಪರೀಕ್ಷೆಯನ್ನು ಭಾರಿ ಮಳೆ ಕಾರಣಕ್ಕೆ ಮುಂದೂಡಿ ಪೊಲೀಸ್ ಇಲಾಖೆ ಆದೇಶಿಸಿದೆ.

ಬೆಂಗಳೂರು: ಪೊಲೀಸ್ ಕಾನ್ಸ್​ಟೆಬಲ್ ಹುದ್ದೆಗಳ ನೇಮಕಾತಿಗೆ ಆಗಸ್ಟ್ 19ರಂದು ನಿಗದಿಪಡಿಸಿದ್ದ ಲಿಖಿತ ಪರೀಕ್ಷೆಯನ್ನು ಭಾರಿ ಮಳೆ ಕಾರಣಕ್ಕೆ ಮುಂದೂಡಿ ಪೊಲೀಸ್ ಇಲಾಖೆ ಆದೇಶಿಸಿದೆ. ಸಿವಿಲ್ ಪೊಲೀಸ್ ಕಾನ್ಸ್​ಟೆಬಲ್ (ಪುರುಷ, ಮಹಿಳಾ) 2,113 ಹುದ್ದೆಗಳಿಗೆ ಜೂ.26ರಂದು ಅರ್ಜಿ ಆಹ್ವಾನಿಸಲಾಗಿತ್ತು. ರಾಜ್ಯದ 46 ಪರೀಕ್ಷಾ ಕೇಂದ್ರಗಳಲ್ಲಿ 35,740 ಅಭ್ಯರ್ಥಿಗಳು ಭಾನುವಾರ ಪರೀಕ್ಷೆ ಬರೆಯಬೇಕಿತ್ತು. ರಾಜ್ಯದ ವಿವಿಧೆಡೆ ಭಾರಿ ಮಳೆ ಸುರಿಯುತ್ತಿದ್ದು ಪ್ರವಾಹ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಮುಂದಿನ ಪರೀಕ್ಷೆ ದಿನಾಂಕವನ್ನು ತಿಳಿಸಲಾಗುವುದು ಎಂದು ಪೊಲೀಸ್ ನೇಮಕಾತಿ ಮತ್ತು ತರಬೇತಿ ವಿಭಾಗದ ಎಡಿಜಿಪಿ ರಾಘವೇಂದ್ರ ಔರಾದ್ಕರ್ ತಿಳಿಸಿದ್ದಾರೆ.