ಪ್ರಾಮಾಣಿಕ ತೆರಿಗೆ ಪಾವತಿದಾರರಿಗೆ ಸನ್ಮಾನ: ಕೇಂದ್ರದಿಂದ ಹೊಸ ನೀತಿ

0
395

ದೇಶದಲ್ಲಿ ತೆರಿಗೆ ಪಾವತಿಗೆ ಉತ್ತೇಜನ ನೀಡಲು ಮುಂದಾಗಿರುವ ಕೇಂದ್ರ ಸರಕಾರ ಹೊಸ ನೀತಿ ಜಾರಿಗೆ ತರಲು ಮುಂದಾಗಿದೆ.
ಈ ನೀತಿಯನ್ವಯ ಪ್ರಾಮಾಣಿಕವಾಗಿ ತೆರಿಗೆ ಪಾವತಿಸುವವರನ್ನು ಸನ್ಮಾನಿಸಲು ಕೇಂದ್ರ ಸರಕಾರ ನಿರ್ಧರಿಸಿದೆ.
ಆದಾಯ ತೆರಿಗೆ ಇಲಾಖೆಯ ಕೇಂದ್ರ ನೇರ ತೆರಿಗೆ ಮಂಡಳಿ ಇದಕ್ಕಾಗಿ ಸಮಿತಿಯೊಂದನ್ನು ರೂಪಿಸಿದೆ.

ಹೊಸದಿಲ್ಲಿ: ದೇಶದಲ್ಲಿ ತೆರಿಗೆ ಪಾವತಿಗೆ ಉತ್ತೇಜನ ನೀಡಲು ಮುಂದಾಗಿರುವ ಕೇಂದ್ರ ಸರಕಾರ ಹೊಸ ನೀತಿ ಜಾರಿಗೆ ತರಲು ಮುಂದಾಗಿದೆ. 

ಈ ನೀತಿಯನ್ವಯ ಪ್ರಾಮಾಣಿಕವಾಗಿ ತೆರಿಗೆ ಪಾವತಿಸುವವರನ್ನು ಸನ್ಮಾನಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. 

ಈಗಾಗಲೇ ಹಲವು ಕಡೆಗಳಲ್ಲಿ ಪ್ರಾಮಾಣಿಕ ತೆರಿಗೆ ಪಾವತಿದಾರರಿಗೆ ಸನ್ಮಾನ ಮಾಡಲಾಗುತ್ತಿದೆ. ಆದರೆ ಇದಕ್ಕೆ ನೀತಿ ರೂಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. 

ಆದಾಯ ತೆರಿಗೆ ಇಲಾಖೆಯ ಕೇಂದ್ರ ನೇರ ತೆರಿಗೆ ಮಂಡಳಿ ಇದಕ್ಕಾಗಿ ಸಮಿತಿಯೊಂದನ್ನು ರೂಪಿಸಿದೆ. 

ಕೇಂದ್ರ ಹಣಕಾಸು ಸಚಿವಾಲಯದ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗುತ್ತಿದೆ. 

ಹಣಕಾಸು ಸಚಿವಾಲಯದ ಪ್ರಸ್ತಾವಕ್ಕೆ ಪ್ರಧಾನಮಂತ್ರಿ ಕಾರ್ಯಾಲಯ ಕೂಡ ಹಸಿರು ನಿಶಾನೆ ತೋರಿದೆ. 

ಕಳೆದ ವರ್ಷ ನಡೆದ ಸಮಾವೇಶವೊಂದರಲ್ಲಿ ಮಾತನಾಡಿದ್ದ ಮೋದಿ, ತೆರಿಗೆ ಪಾವತಿ ಉತ್ತೇಜನಕ್ಕೆ ಒತ್ತು ನೀಡಬೇಕೆಂದು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. 

ಈಗಾಗಲೇ ಹೊಸ ಯೋಜನೆಗೆ ರೂಪು-ರೇಷೆ ನಿಗದಿಪಡಿಸಲಾಗುತ್ತಿದೆ. ಈ ವರ್ಷದ ಅಂತ್ಯದೊಳಗೆ ಹೊಸ ನೀತಿ ಅನುಷ್ಠಾನಕ್ಕೆ ತರಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.