ಪ್ರೊ.ಅಮೃತ ಸೋಮೇಶ್ವರ ಅವರಿಗೆ “ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ”

0
570

ಹಿರಿಯ ಸಾಹಿತಿ ಪ್ರೊ.ಅಮೃತ ಸೋಮೇಶ್ವರ ಅವರು ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಉಡುಪಿ: ಹಿರಿಯ ಸಾಹಿತಿ ಪ್ರೊ.ಅಮೃತ ಸೋಮೇಶ್ವರ ಅವರು ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ವತಿಯಿಂದ ನೀಡುವ ಈ ಪ್ರಶಸ್ತಿ  1 ಲಕ್ಷ ನಗದು ಒಳಗೊಂಡಿದೆ ಎಂದು ಕೇಂದ್ರದ ಸಂಯೋಜಕ ಪ್ರೊ.ವರದೇಶ ಹಿರೇಗಂಗೆ ಬುಧವಾರ ಇಲ್ಲಿ ತಿಳಿಸಿದರು.

ಅನಾರೋಗ್ಯದ ಕಾರಣ ಸೋಮೇಶ್ವರದಲ್ಲಿರುವ ಪ್ರೊ.ಅಮೃತ ಅವರ ನಿವಾಸಕ್ಕೆ ಇದೇ ಮಾರ್ಚ್ 23ರಂದು ತೆರಳಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮಣಿಪಾಲ ಗ್ಲೋಬಲ್‌ ಮುಖ್ಯಸ್ಥ ಟಿ.ವಿ.ಮೋಹನದಾಸ್ ಪೈ ಅವರು ತಮ್ಮ ತಾಯಿ ವಿಮಲಾ ಪೈ ಅವರ ಹೆಸರಿನಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಮೂಲಕ ಪ್ರಶಸ್ತಿ ನೀಡುತ್ತಿದ್ದಾರೆ ಎಂದರು.