ಫೆಬ್ರುವರಿ 5 ರಿಂದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

0
17

ಆಖಿಲ ಭಾರತ 85 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2020 ರ ಫೆಬ್ರುವರಿ 5, 6 ಮತ್ತು 7 ರಂದು ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಕಲಬುರ್ಗಿ: ಆಖಿಲ ಭಾರತ 85 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2020 ರ ಫೆಬ್ರುವರಿ 5, 6 ಮತ್ತು 7 ರಂದು ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಜಿಲ್ಲಾಮಟ್ಟದ ಅಧಿಕಾರಿಗಳು, ಸಾಹಿತಿಗಳು ಮತ್ತು ಸಂಘ ಸಂಸ್ಥೆಗಳೊಂದಿಗೆ ಸಭೆ ನಡೆಸಿ, ಸ್ಥಳ ಪರಿಶೀಲನೆ ಮಾಡಿದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ, ಫೆಬ್ರುವರಿ ಎರಡನೇ ವಾರದಿಂದ ಶಾಲಾ ಪರೀಕ್ಷೆಗಳು ಆರಂಭವಾಗಲಿವೆ. ಹೀಗಾಗಿ ಫೆಬ್ರುವರಿ ಮೊದಲ ವಾರವೇ ಸಮ್ಮೇಳನ ನಡೆಸಲು ನಿರ್ಧರಿಸಿದ್ದೇವೆ. ಡಿಸೆಂಬರ್ ನಲ್ಲಿ ಕಸಾಪ ಕಾರ್ಯಕಾರಿ ಸಮಿತಿ ಸಭೆ ನಡೆಸಿ ಸಮ್ಮೇಳನದ ಸರ್ವಾಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.

ಗುಲಬರ್ಗಾ ವಿ.ವಿ ಯ ಮುಖ್ಯ ಕ್ರೀಡಾಂಗಣದಲ್ಲಿ ಮುಖ್ಯ ವೇದಿಕೆ ನಿರ್ಮಾಣವಾಗಲಿದೆ. ವಿ.ವಿ ಯ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣ ಹಾಗೂ ಆಡಳಿತ ಕಚೇರಿ ಇರುವ ಕಾರ್ಯಸೌಧದ ಮಹಾತ್ಮಾ ಗಾಂಧಿ ಸಭಾಂಗಣದಲ್ಲಿ ಸಮಾನಾಂತರ ಗೋಷ್ಠಿಗಳನ್ನು ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಸಮ್ಮೇಳನಕ್ಕೆ 10 ರಿಂದ 12 ಕೋಟಿ ರೂ ವೆಚ್ಚವಾಗಲಿದೆ ಸಮ್ಮೇಳನದ ಸರ್ವಾಧ್ಯಕ್ಷರು ಕಲ್ಯಾಣ ಕರ್ನಾಟಕವರೇ ಆಗಬೇಕೋ ಹೊರಗಿನವರು ಆಗಬೇಕೋ ಎಂಬ ಬಗ್ಗೆ ಈಗಲೇ ಏನನ್ನೂ ಹೇಳಲಾರೆ ಎಂದರು