ಬಾಹ್ಯಾಕಾಶ ಕ್ಷೇತ್ರದಲ್ಲಿ ವಿಜ್ಞಾನಿಗಳ ಮತ್ತೊಂದು ಮಹತ್ವದ ಸಾಧನೆ : ಅಭಿನಂದಿಸಿದ ಪ್ರಧಾನಿ ಮೋದಿ

0
794

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು, ಉಪಗ್ರಹ ವಿರೋಧಿ ಕ್ಷಿಪಣಿ ವ್ಯವಸ್ಥೆ (ಎ-ಸ್ಯಾಟ್‌) ಮೂಲಕ ಲೈವ್‌ ಉಪಗ್ರಹವನ್ನು ಯಶಸ್ವಿಯಾಗಿ ಹೊಡೆದುರುಳಿಸುವ ಮೂಲಕ ಅಪರೂಪದ ಸಾಧನೆ ಮಾಡಿ ಭಾರತ ತನ್ನನ್ನು ಗಣ್ಯ ಬಾಹ್ಯಾಕಾಶ ಶಕ್ತಿಯನ್ನಾಗಿ ರೂಪಿಸಿಕೊಂಡಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.

ನವದೆಹಲಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು, ಉಪಗ್ರಹ ವಿರೋಧಿ ಕ್ಷಿಪಣಿ ವ್ಯವಸ್ಥೆ (ಎ-ಸ್ಯಾಟ್‌) ಮೂಲಕ ಲೈವ್‌ ಉಪಗ್ರಹವನ್ನು ಯಶಸ್ವಿಯಾಗಿ ಹೊಡೆದುರುಳಿಸುವ ಮೂಲಕ ಅಪರೂಪದ ಸಾಧನೆ ಮಾಡಿ ಭಾರತ ತನ್ನನ್ನು ಗಣ್ಯ ಬಾಹ್ಯಾಕಾಶ ಶಕ್ತಿಯನ್ನಾಗಿ ರೂಪಿಸಿಕೊಂಡಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಮುನ್ನ ಟ್ವೀಟ್‌ ಮಾಡಿದ್ದ ಅವರು, ಶೀಘ್ರದಲ್ಲೇ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುವುದಾಗಿ ಹೇಳಿದ್ದರು. ಸುಮಾರು ಬೆಳಗ್ಗೆ 11.45 – 12 ಗಂಟೆ ಸುಮಾರಿಗೆ ಮುಖ್ಯವಾದ ಸಂದೇಶವೊಂದನ್ನು ನೀಡಲಿದ್ದೇನೆ. ದೂರದರ್ಶನ, ರೇಡಿಯೋ ಅಥವಾ ಸಾಮಾಜಿಕ ಜಾಲತಾಣದಲ್ಲಿ ನೋಡಿ ಎಂದು ಟ್ವೀಟ್‌ ಮಾಡಿದ್ದರು.

ಭಾರತದ ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆ ಡಿಆರ್‌ಡಿಒ ಸಹಯೋಗದಲ್ಲಿ ಬಾಹ್ಯಾಕಾಶದ ಭೂಮಿಯ ಕಡಿಮೆ ಕಕ್ಷದಲ್ಲಿ ಎ-ಸ್ಯಾಟ್ ಆ್ಯಂಟಿ ಸ್ಯಾಟಲೈಟ್ ಮಿಸೈಲ್ ಮೂಲಕ ಲೈವ್ ಸ್ಯಾಟಲೈಟ್‌ ಅನ್ನು ಯಶಸ್ವಿಯಾಗಿ ಹೊಡೆದುರುಳಿಸಿದೆ. ಈ ಬಗ್ಗೆ ಪ್ರಧಾನಿ ಮೋದಿ ದೇಶದ ಜನತೆಗೆ ಮಾಹಿತಿ ನೀಡಿದ್ದು, ವಿಜ್ಞಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಉಪಗ್ರಹ ವಿರೋಧಿ ಕ್ಷಿಪಣಿ (ಎ-ಸ್ಯಾಟ್‌) ಮೂಲಕ ಭಾರತವು ಬಾಹ್ಯಾಕಾಶ ಶಕ್ತಿಯಾಗಿ ರೂಪುಗೊಂಡಿದೆ. ಮಿಷನ್‌ ಶಕ್ತಿ ಕಾರ್ಯಾಚರಣೆಯು ಅತ್ಯಂತ ಕಷ್ಟದ್ದಾಗಿದ್ದು, ಕೇವಲ 3 ನಿಮಿಷಗಳಲ್ಲಿ ಯಶಸ್ವಿಯಾಗಿ ಈ ಕಾರ್ಯಾಚರಣೆ ಮಾಡಲಾಗಿದೆ. ಅತಿ ಕಡಿಮೆ ವೆಚ್ದದಲ್ಲಿ ನಮ್ಮ ವಿಜ್ಞಾನಿಗಳು ಈ ಸಾಧನೆ ಮಾಡಿದ್ದಾರೆ. ಈ ಮೂಲಕ ಭಾರತವು ಬಾಹ್ಯಾಕಾಶ ಶಕ್ತಿಯಾಗಿ ರೂಪುಗೊಂಡಿರುವ ವಿಶ್ವದ ಅಮೆರಿಕ, ರಷ್ಯಾ ಮತ್ತು ಚೀನಾಗಳ ಸಾಲಿಗೆ ಸೇರಿದೆ ಎಂದು ಹೇಳಿದ್ದಾರೆ.