ಬಿಜೆಪಿ ಪಕ್ಷಕ್ಕೆ ಕ್ರಿಕೆಟಿಗ “ಗೌತಮ್ ಗಂಭೀರ್”

0
256

ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ (37) ಅವರು ಶುಕ್ರವಾರ ಬಿಜೆಪಿ ಸೇರಿದ್ದಾರೆ. ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಯೇ ಇಲ್ಲವೇ ಎಂಬುದು ಇನ್ನೂ ನಿರ್ಧಾರವಾಗಿಲ್ಲ.

ನವದೆಹಲಿ (ಪಿಟಿಐ): ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ (37) ಅವರು ಶುಕ್ರವಾರ ಬಿಜೆಪಿ ಸೇರಿದ್ದಾರೆ. ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಯೇ ಇಲ್ಲವೇ ಎಂಬುದು ಇನ್ನೂ ನಿರ್ಧಾರವಾಗಿಲ್ಲ.

ಶುಕ್ರವಾರ ಇಲ್ಲಿ ನಡೆದ ಕಾರ್ಯ
ಕ್ರಮದಲ್ಲಿ ಅವರು ಬಿಜೆಪಿ ಸೇರಿದರು. ಕೇಂದ್ರ ಸಚಿವರಾದ ಅರುಣ್ ಜೇಟ್ಲಿ ಮತ್ತು ರವಿಶಂಕರ್ ಪ್ರಸಾದ್ ಅವರು ಗಂಭೀರ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಮೀನಾಕ್ಷಿ ಲೇಖಿ ಅವರು ಪ್ರತಿನಿಧಿಸುತ್ತಿರುವ ನವದೆಹಲಿ ಲೋಕಸಭಾ ಕ್ಷೇತ್ರದಿಂದ ದೆಹಲಿ ನಿವಾಸಿಯಾಗಿರುವ ಗಂಭೀರ್ ಅವರನ್ನು ಕಣಕ್ಕೆ ಇಳಿಸುವ ಬಗ್ಗೆ ಬಿಜೆಪಿ ಚಿಂತನೆ ನಡೆಸಿದೆ. ಆದರೆ ಈ ಸಂಬಂಧ ಇನ್ನಷ್ಟೇ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಿದೆ.

ಗಂಭೀರ್ ಅವರು ದೆಹಲಿ ನಿವಾಸಿಗಳ ಜತೆ ಉತ್ತಮ ಸಂಪರ್ಕ ಹೊಂದಿದ್ದಾರೆ. ಪಕ್ಷವು ಅವರ ಸಾಮರ್ಥ್ಯ ವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲಿದೆ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಧ್ಯೇಯ ಮತ್ತು ದೃಷ್ಟಿಕೋನಗಳಿಂದ ಪ್ರಭಾವಿತನಾಗಿ ನಾನು ಬಿಜೆಪಿ ಸೇರುತ್ತಿದ್ದೇನೆ. ದೇಶದ ಕಲ್ಯಾಣಕ್ಕಾಗಿ ದುಡಿಯುತ್ತೇನೆ

ಗೌತಮ್ ಗಂಭೀರ್ ಮಾಜಿ ಕ್ರಿಕೆಟಿಗ