ಬೆಂಗಳೂರಿಗೆ ಕ್ರಿಕೆಟ್ ವಿಶ್ವಕಪ್ ಡಿಸೆಂಬರ್ 8ರಂದು

0
603

ಮುಂದಿನ ವರ್ಷ ಇಂಗ್ಲೆಂಡ್‌ ನಲ್ಲಿ ನಡೆಯಲಿರುವ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್‌ನ ಟ್ರೋಫಿಯನ್ನು ಡಿಸೆಂಬರ್ 8ರಂದು ಬೆಂಗಳೂರಿನಲ್ಲಿ ಪ್ರದರ್ಶನಕ್ಕೆ ಇಡಲಾಗುತ್ತಿದೆ.

ಮುಂಬೈ: ಮುಂದಿನ ವರ್ಷ ಇಂಗ್ಲೆಂಡ್‌ ನಲ್ಲಿ ನಡೆಯಲಿರುವ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್‌ನ ಟ್ರೋಫಿಯನ್ನು ಡಿಸೆಂಬರ್ 8ರಂದು ಬೆಂಗಳೂರಿನಲ್ಲಿ ಪ್ರದರ್ಶನಕ್ಕೆ ಇಡಲಾಗುತ್ತಿದೆ.

ಡಿಸೆಂಬರ್ 1 ರ ಶನಿವಾರವೇ ಟ್ರೋಫಿಯನ್ನು ಭಾರತಕ್ಕೆ ತರಲಾಗಿದೆ. ಭಾನುವಾ ರದಿಂದ ದೇಶದ ಒಂಬತ್ತು ಮಹಾನಗರಳಲ್ಲಿ ಪ್ರದರ್ಶನ ಏರ್ಪಡಿಸಲಾಗುತ್ತಿದೆ. ಮುಂಬೈನಲ್ಲಿ ಭಾನುವಾರ ಪ್ರದರ್ಶನಕ್ಕೆ ಇಡಲಾಗುವುದು. ಡಿಸೆಂಬರ್ 8  ರಂದು ಬೆಂಗಳೂರಿನ ಕೋರಮಂಗಲದಲ್ಲಿರುವ ಫೋರಂ ಮಾಲ್‌ನಲ್ಲಿ  ಇಡಲಾಗುವುದು.  ಡಿಸೆಂಬರ್ 15ರಂದು ಕೋಲ್ಕತ್ತ,ಡಿಸೆಂಬರ್  23ರಂದು ದೆಹಲಿ ಯಲ್ಲಿ ಪ್ರದರ್ಶನಗೊಳ್ಳಲಿದೆ. ಟ್ರೋಫಿ ಪ್ರದರ್ಶನದ ಇನ್ನುಳಿದ ನಗರಗಳ ಹೆಸರುಗಳನ್ನು ಇನ್ನೂ ಬಹಿರಂಗಪಡಿಸಿಲ್ಲ ಎಂದು ಎಎನ್‌ಐ ವರದಿ ಮಾಡಿದೆ.

2019ರ ಮೇ 30ರಿಂದ ಜುಲೈ 14ರವರೆಗೆ ವಿಶ್ವಕಪ್ ಟೂರ್ನಿ ನಡೆಯಲಿದೆ.