ಭಾರತೀಯ ಸಿನಿಮಾ ಮತ್ತು ಟಿ.ವಿ ಕಾರ್ಯಕ್ರಮಗಳಿಗೆ ನಿರ್ಬಂಧ : ಪಾಕಿಸ್ತಾನ ಸುಪ್ರೀಂಕೋರ್ಟ್

0
704

ಪಾಕಿಸ್ತಾನ ಟಿವಿ ವಾಹಿನಿಗಳಲ್ಲಿ ಭಾರತೀಯ ಸಿನಿಮಾ ಮತ್ತು ಟಿ.ವಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವುದಕ್ಕೆ ಅನುಮತಿ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸಾಕಿಬ್‌ ನಿಸಾರ್ ತಿಳಿಸಿದ್ದಾರೆ.

ಇಸ್ಲಾಮಾಬಾದ್‌ (ಪಿಟಿಐ): ಪಾಕಿಸ್ತಾನ ಟಿವಿ ವಾಹಿನಿಗಳಲ್ಲಿ ಭಾರತೀಯ ಸಿನಿಮಾ ಮತ್ತು ಟಿ.ವಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವುದಕ್ಕೆ  ಅನುಮತಿ ನೀಡುವುದಿಲ್ಲ ಎಂದು  ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸಾಕಿಬ್‌ ನಿಸಾರ್ ತಿಳಿಸಿದ್ದಾರೆ.

ಭಾರತೀಯ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವುದಿಂದ ‘ಪಾಕಿಸ್ತಾನ ಸಂಸ್ಕೃತಿಗೆ ಧಕ್ಕೆಯಾಗುತ್ತದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಈ ಬಗ್ಗೆ ಹೈಕೋರ್ಟ್‌ ನೀಡಿದ್ದ ಆದೇಶದ ವಿರುದ್ಧ ಪಾಕಿಸ್ತಾನ ವಿದ್ಯುನ್ಮಾನ ಮಾಧ್ಯಮ ನಿಯಂತ್ರಣ ಪ್ರಾಧಿಕಾರ (ಪಿಇಎಂಆರ್‌ಎ) ಮೇಲ್ಮನವಿ ಸಲ್ಲಿಸಿತ್ತು.