ಭಾರತ ಹಾಕಿ ತಂಡದ ನಾಯಕ ಮನ್‌ಪ್ರೀತ್– ಅಡಿದಾಸ್‌ ಒಪ್ಪಂದ

0
263

ಅಡಿದಾಸ್‌ ಕಂಪನಿ ಮಂಗಳವಾರ ಭಾರತ ಹಾಕಿ ತಂಡದ ನಾಯಕ ಮನ್‌ಪ್ರೀತ್‌ ಸಿಂಗ್‌ ಜೊತೆ ಒಪ್ಪಂದ ಮಾಡಿಕೊಂಡಿದೆ.

ನವದೆಹಲಿ (ಪಿಟಿಐ): ಅಡಿದಾಸ್‌ ಕಂಪನಿ ಮಂಗಳವಾರ ಭಾರತ ಹಾಕಿ ತಂಡದ ನಾಯಕ ಮನ್‌ಪ್ರೀತ್‌ ಸಿಂಗ್‌ ಜೊತೆ ಒಪ್ಪಂದ ಮಾಡಿಕೊಂಡಿದೆ.

ಈ ವರ್ಷ ಅರ್ಜುನ ಪ್ರಶಸ್ತಿಗೆ ಭಾಜನ ರಾಗಿದ್ದ ಮನ್‌ಪ್ರೀತ್‌, ನವೆಂಬರ್‌ 28 ರಿಂದ ಡಿಸೆಂಬರ್‌ 16ರವರೆಗೆ ಭುವನೇಶ್ವರದಲ್ಲಿ ನಡೆಯುವ ವಿಶ್ವಕಪ್‌ನ ಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಅವರ ಸಾರಥ್ಯದಲ್ಲಿ ಭಾರತ ತಂಡ ವಿಶ್ವ ಹಾಕಿ ಲೀಗ್‌ ಫೈನಲ್ಸ್‌ನಲ್ಲಿ ಕಂಚಿನ ಪದಕ ಗೆದ್ದಿತ್ತು. 2012 ಮತ್ತು 2016ರ ಒಲಿಂಪಿಕ್ಸ್‌, ಚಾಂಪಿಯನ್ಸ್‌ ಟ್ರೋಫಿ ಮತ್ತು 2014ರ ಕಾಮನ್‌ವೆಲ್ತ್‌ ಕ್ರೀಡಾಕೂಟಗಳಲ್ಲಿ ಮನ್‌ಪ್ರೀತ್‌ ಆಡಿದ್ದರು.