ಮತ್ತೆ ಸತ್ಯಾಗ್ರಹ: ಅಣ್ಣಾ ಎಚ್ಚರಿಕೆ

0
393

ಲೋಕಪಾಲರ ನೇಮಕ ಮಾಡದೇ ಇದ್ದರೆ, ಬರುವ ಜನವರಿ 30ರಿಂದ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಶನಿವಾರ ಎಚ್ಚರಿಕೆ ನೀಡಿದ್ದಾರೆ.

ಮುಂಬೈ (ಪಿಟಿಐ): ಲೋಕಪಾಲರ ನೇಮಕ ಮಾಡದೇ ಇದ್ದರೆ, ಬರುವ 2019 ರ ಜನವರಿ 30ರಿಂದ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಡಿಸೆಂಬರ್ 1 ರ ಶನಿವಾರ ಎಚ್ಚರಿಕೆ ನೀಡಿದ್ದಾರೆ.

ಪ್ರಧಾನಿ ಕಚೇರಿಯ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್‌ ಅವರಿಗೆ ಈ ಬಗ್ಗೆ ಪತ್ರ ಬರೆದಿರುವ ಹಜಾರೆ, ಎನ್‌ಡಿಎ ಸರ್ಕಾರ ಕೇಂದ್ರದಲ್ಲಿ ಲೋಕಪಾಲರು ಮತ್ತು ರಾಜ್ಯಗಳಲ್ಲಿ ಲೋಕಾಯುಕ್ತರ ನೇಮಕ ಮಾಡದೆ ತಪ್ಪಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರ ಹಾಗೂ ಮಹಾರಾಷ್ಟ್ರ ಸರ್ಕಾರದಿಂದ ಬೇಡಿಕೆ ಈಡೇರಿಸುವುದಾಗಿ ನೀಡಿದ್ದ ಭರವಸೆ ಹುಸಿಯಾಗಿದೆ. ಹೀಗಾಗಿ ಸತ್ಯಾಗ್ರಹ ಅನಿವಾರ್ಯ ಎಂದವರು ಹೇಳಿದ್ದಾರೆ.