ಮಧ್ಯಪ್ರದೇಶದ ಸಿಎಂ ಆಗಿ ಕಮಲ್​ನಾಥ್​ ಪ್ರಮಾಣವಚನ ಸ್ವೀಕಾರ

0
596

ಮಧ್ಯಪ್ರದೇಶದ 18 ನೇ ಮುಖ್ಯಮಂತ್ರಿಯಾಗಿ ಕಮಲ್​ನಾಥ್​ 2018 ಡಿಸೆಂಬರ್ 17 ರ ಸೋಮವಾರ ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಿದರು.

ಭೋಪಾಲ್​: ಮಧ್ಯಪ್ರದೇಶದ 18 ನೇ ಮುಖ್ಯಮಂತ್ರಿಯಾಗಿ ಕಮಲ್​ನಾಥ್​ ಸೋಮವಾರ ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಿದರು.

ಭೋಪಾಲ್​ನ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರು ಕಮಲ್​ನಾಥ್​ಗೆ ಪ್ರಮಾಣ ವಚನ ಬೋಧಿಸಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಉಪ ಮುಖ್ಯಮಂತ್ರಿ ಸಚಿನ್​ ಪೈಲಟ್​, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​, ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ, ಕರ್ನಾಟಕದ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ, ಕಾಂಗ್ರೆಸ್​ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಸೇರಿದಂತೆ ವಿರೋಧ ಪಕ್ಷಗಳ ಪ್ರಮುಖ ನಾಯಕರು ಪಾಲ್ಗೊಂಡು ಒಗ್ಗಟ್ಟು ಪ್ರದರ್ಶಿಸಿದರು.