ಮಲಾಲಾಗೆ ಹಾರ್ವರ್ಡ್‌ ವಿಶ್ವವಿದ್ಯಾಲಯದ 2018 ನೇ ಸಾಲಿನ ಗ್ಲಿಟ್ಸ್‌ಮನ್ ಪ್ರಶಸ್ತಿ

0
396

ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ, ಪಾಕಿಸ್ತಾನ ಮೂಲದ ಮಲಾಲಾ ಯೂಸುಫ್‌ಝೈ ಅವರು ಹಾರ್ವರ್ಡ್‌ ವಿಶ್ವವಿದ್ಯಾಲಯದ 2018ನೇ ಸಾಲಿನ ಗ್ಲಿಟ್ಸ್‌ಮನ್‌ ಪ್ರಶಸ್ತಿಗೆ
ಪಾತ್ರರಾಗಿದ್ದಾರೆ.

ಕೇಂಬ್ರಿಡ್ಜ್‌ (ಎಪಿ): ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ, ಪಾಕಿಸ್ತಾನ ಮೂಲದ ಮಲಾಲಾ ಯೂಸುಫ್‌ಝೈ ಅವರು ಹಾರ್ವರ್ಡ್‌ ವಿಶ್ವವಿದ್ಯಾಲಯದ 2018ನೇ ಸಾಲಿನ ಗ್ಲಿಟ್ಸ್‌ಮನ್‌ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕಿಗಾಗಿ ನಡೆಸಿದ ಹೋರಾಟಕ್ಕಾಗಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಡಿಸೆಂಬರ್ 6ರಂದು ಪ್ರದಾನ ಮಾಡಲಾಗುವುದು ಎಂದು ಹಾರ್ವರ್ಡ್‌ ಕೆನಡಿ ಸ್ಕೂಲ್ ಹೇಳಿದೆ.