ಮಹಾರಾಷ್ಟ್ರ ರಾಜ್ಯ ಸರಕಾರಿ ನೌಕರರಿಗೆ ಬಂಪರ್‌ ಸಂಬಳ

0
1140

ಮುಂಬರುವ ಲೋಕಸಭೆ ಚುನಾವಣೆ ಗಮನದಲ್ಲಿರಿಸಿಕೊಂಡು ಮಹಾರಾಷ್ಟ್ರ ಸರಕಾರ, ರಾಜ್ಯ ಸರಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಿದೆ. ಸಿಎಂ ದೇವೇಂದ್ರ ಫಡ್ನವಿಸ್‌ ನೇತೃತ್ವದಲ್ಲಿ
ಡಿಸೆಂಬರ್ 27 ರ ಗುರುವಾರ ನಡೆದ ಸಚಿವ ಸಂಪುಟ ಸಭೆ ಈ ತೀರ್ಮಾನ ಕೈಗೊಂಡಿದ್ದು, ಈ ಮೂಲಕ ಹೊಸ ವರ್ಷಕ್ಕೆ ಬಂಪರ್‌ ಕೊಡುಗೆ ನೀಡಿದೆ.

ಮುಂಬಯಿ: ಮುಂಬರುವ ಲೋಕಸಭೆ ಚುನಾವಣೆ ಗಮನದಲ್ಲಿರಿಸಿಕೊಂಡು ಮಹಾರಾಷ್ಟ್ರ ಸರಕಾರ, ರಾಜ್ಯ ಸರಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಿದೆ. ಸಿಎಂ ದೇವೇಂದ್ರ ಫಡ್ನವಿಸ್‌ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಈ ತೀರ್ಮಾನ ಕೈಗೊಂಡಿದ್ದು, ಈ ಮೂಲಕ ಹೊಸ ವರ್ಷಕ್ಕೆ ಬಂಪರ್‌ ಕೊಡುಗೆ ನೀಡಿದೆ. 

2019ರ ಜನವರಿ 1ರಿಂದ ಪರಿಷ್ಕೃತ ವೇತನ ಜಾರಿಗೆ ಬರಲಿದ್ದು, ಫೆಬ್ರವರಿ ಸಂಬಳದಲ್ಲಿ ನೌಕರರ ಕೈಸೇರಲಿದೆ. 2016ರ ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಸುಮಾರು 17 ಲಕ್ಷ ನೌಕರರು ಹಾಗೂ 7 ಲಕ್ಷ ಪಿಂಚಣಿದಾರರಿಗೆ ಇದರಿಂದ ಅನುಕೂಲವಾಗಲಿದೆ. ವೇತನದಲ್ಲಿ ಕನಿಷ್ಠ 4 ಸಾವಿರದಿಂದ ಗರಿಷ್ಠ 14 ಸಾವಿರ ರೂ.ವರೆಗೆ ಏರಿಕೆಯಾಗಲಿದೆ. 7ನೇ ವೇತನ ಆಯೋಗದ ಜಾರಿಯಿಂದ ಸರಕಾರದ ಬೊಕ್ಕಸಕ್ಕೆ 21,530 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ. ಮೂರು ವರ್ಷಗಳ ಬಾಕಿ ಮೊತ್ತವನ್ನು (ಅರಿಯರ್ಸ್‌) ಐದು ಕಂತುಗಳಲ್ಲಿ ನೌಕರರ ಭವಿಷ್ಯನಿಧಿ ಖಾತೆಗೆ ಜಮೆ ಮಾಡಲಾಗುವುದು ಎಂದು ಸರಕಾರ ತಿಳಿಸಿದೆ.