ಮಹಿಳೆಯರ ಏಷ್ಯಾ ಕಪ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿ

0
11

2018 ಜೂನ್ 1 ರಿಂದ 11 ರವರೆಗೆ ಮಲೇಷ್ಯಾದ ಕೌಲಾಲಂಪುರದಲ್ಲಿ ಮಹಿಳೆಯರ ಏಷ್ಯಾ ಕಪ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ.

ಕೌಲಾಲಂಪುರ : 2018 ಜೂನ್ 3 ರ ಭಾನುವಾರ ಇಲ್ಲಿ ಆರಂಭವಾಗಲಿರುವ ಏಷ್ಯಾ ಕಪ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಭಾರತ ತಂಡವು ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ಕಣಕ್ಕಿಳಿಯಲಿದೆ.

ಕಿನರಾರಾ ಅಕಾಡೆಮಿ ಓವಲ್ ಕ್ರೀಡಾಂಗಣದಲ್ಲಿ ನಡೆಯುವ ಮೊದಲ ಪಂದ್ಯದಲ್ಲಿ ಭಾರತ ತಂಡವು ಅತಿಥೇಯ ಮಲೇಷ್ಯಾ ತಂಡವನ್ನು ಎದುರಿಸಲಿದೆ. ಭಾರತವು ಒಟ್ಟು ಆರು ಬಾರಿ ಪ್ರಶಸ್ತಿ ಗೆದ್ದ ದಾಖಲೆ ಹೊಂದಿದೆ. ಹರ್ಮನ್ ಪ್ರೀತ್ ಕೌರ್ ನಾಯಕತ್ವದ ತಂಡವು ಈ ಬಾರಿಯು ಪ್ರಶಸ್ತಿ ಜಯಿಸುವ ಹುಮ್ಮಸ್ಸಿನಲ್ಲಿದೆ.

ಈ ಟೂನಿಯಲ್ಲಿ ಭಾಗವಹಿಸುವ ತಂಡಗಳು: ಭಾರತ, ಮಲೇಷ್ಯಾ, ಬಾಂಗ್ಲಾದೇಶ, ಪಾಕಿಸ್ತಾನ, ಶ್ರೀಲಂಕಾ, ಥೈಲ್ಯಾಂಡ್

ಭಾರತ ತಂಡದಲ್ಲಿ ಅನುಭವಿ ಆಟಗಾರ್ತಿಯರು ಇದ್ದಾರೆ. ಉಪನಾಯಕಿ ಸ್ಮೃತಿ ಮಂದಾನ, ಮಿಥಾಲಿ ರಾಜ್, ಜೂಲನ್ ಗೋಸ್ವಾಮಿ, ವೇದಾ ಕೃಷ್ಣಮೂರ್ತಿ, ತಾನ್ಯಾ ಭಾಟಿಯಾ, ರಾಜೇಶ್ವರಿ ಗಾಯಕವಾಡ್, ಏಕ್ತಾ ಬಿಷ್ಠ್, ಜೆಮಿಮಾ ರಾಡ್ರಿಗಸ್ ಮುಂತಾದವರು ಇದ್ದಾರೆ.

ಭಾರತ ತಂಡವು ಜೂನ್ 4 ರಂದು ಥಾಯ್ಲೆಂಡ್, ಜೂನ್ 6 ರಂದು ಬಾಂಗ್ಲಾದೇಶ, ಜೂನ್ 7 ರಂದು ಶ್ರೀಲಂಕಾ ಮತ್ತು ಜೂನ್ 8 ರಂದು ಪಾಕಿಸ್ತಾನ ವಿರುದ್ದ ಆಡಲಿದೆ.

ಏಷ್ಯನ್ ಕ್ರಿಕೆಟ್ ಕೌನ್ಸಿಲ್(ಎಸಿಸಿ)  ಈ ಟೂರ್ನಿಯನ್ನು ಆಯೋಜಿಸಿದೆ. ವಿಶ್ವ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಆಡಲು ಏಷ್ಯಾದ ತಂಡಗಳಿಗೆ ಈ ಟೂರ್ನಿಯು ಪೂರ್ವಾಭ್ಯಾಸದ ವೇದಿಕೆಯಾಗಿದೆ.