ಮುಂದಿನ 30 ವರ್ಷಗಳಲ್ಲಿ ಭೂಮಿಯ ತಾಪಮಾನ 1.5 ಡಿಗ್ರಿ ಏರಿಕೆಯಾಗಲಿದೆ: ವಿಶ್ವಸಂಸ್ಥೆ

0
501

ಜಾಗತಿಕ ತಾಪಮಾನವನ್ನು ಕಡಿಮೆ ಮಾಡಲು ಕ್ರಮ ತೆಗೆದುಕೊಳ್ಳದಿದ್ದರೆ ಹವಾಮಾನ ವೈಪರೀತ್ಯದಿಂದಾಗಿ ಮುಂದಿನ 30 ವರ್ಷಗಳಲ್ಲಿ (2030 ರಿಂದ 2052ರವರೆಗೆ) ಭೂಮಿಯ ತಾಪಮಾನ ಸರಾಸರಿ 1.5 ಡಿಗ್ರಿ ಸೆಲ್ಸಿಯಸ್​ ಹೆಚ್ಚಲಿದೆ ಎಂದು ವಿಶ್ವಸಂಸ್ಥೆ ತನ್ನ ವರದಿಯಲ್ಲಿ ಎಚ್ಚರಿಕೆ ನೀಡಿದೆ.

ಲಂಡನ್​: ಜಾಗತಿಕ ತಾಪಮಾನವನ್ನು ಕಡಿಮೆ ಮಾಡಲು ಕ್ರಮ ತೆಗೆದುಕೊಳ್ಳದಿದ್ದರೆ ಹವಾಮಾನ ವೈಪರೀತ್ಯದಿಂದಾಗಿ ಮುಂದಿನ 30 ವರ್ಷಗಳಲ್ಲಿ (2030 ರಿಂದ 2052ರವರೆಗೆ) ಭೂಮಿಯ ತಾಪಮಾನ ಸರಾಸರಿ 1.5 ಡಿಗ್ರಿ ಸೆಲ್ಸಿಯಸ್​ ಹೆಚ್ಚಲಿದೆ ಎಂದು ವಿಶ್ವಸಂಸ್ಥೆ ತನ್ನ ವರದಿಯಲ್ಲಿ ಎಚ್ಚರಿಕೆ ನೀಡಿದೆ.

ಕಳೆದ ವಾರ ದಕ್ಷಿಣ ಕೊರಿಯಾದ ಇಂಚಿಯೋನ್​ನಲ್ಲಿ ನಡೆದ ಹವಾಮಾನ ವೈಪರೀತ್ಯದ ಕುರಿತ ಅಂತರ ಸರ್ಕಾರಿ ಸಮಿತಿಯ (IPCC) ಸಭೆಯಲ್ಲಿ ವರದಿಯನ್ನು ಅಂತಿಮಗೊಳಿಸಲಾಗಿದೆ. 2015ರಲ್ಲಿ ಜಾಗತಿಕ ತಾಪಮಾನ ಏರಿಕೆ ತಡೆಯಲು ಪ್ಯಾರಿಸ್​ ಒಪ್ಪಂದಕ್ಕೆ ಸಹಿ ಹಾಕಿದ ದೇಶಗಳು ತಾಪಮಾನ ಹೆಚ್ಚಳದ ಕುರಿತು ವರದಿ ನೀಡುವಂತೆ ಮನವಿ ಮಾಡಿದ್ದವು. ಅದರಂತೆ ಐಪಿಸಿಸಿ ಸಮಿತಿಯು ತಾಪಮಾನ ಏರಿಕೆ ಕುರಿತು ತನ್ನ ವರದಿಯನ್ನು ವಿಶ್ವಸಂಸ್ಥೆಗೆ ನೀಡಿದೆ.

1800ರ ಮಧ್ಯಭಾಗದಿಂದ ಕಾರ್ಖಾನೆಗಳು ಮತ್ತು ವಾಹನಗಳಿಂದ ಹೊರಹೊಮ್ಮಿದ ಕಾರ್ಬನ್​ ಡೈಆಕ್ಸೈಡ್​ನಿಂದಾಗಿ ಭೂಮಿಯ ಮೇಲೆ ಸರಾಸರಿ ತಾಪಮಾನ 1 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗಿದೆ. ಪ್ರಸ್ತುತ ತಾಪಮಾನ ಹೆಚ್ಚುತ್ತಿರುವ ಪ್ರಮಾಣವನ್ನು ಗಮನಿಸಿದರೆ, 2030 ರಿಂದ 2052ರ ಒಳಗೆ ತಾಪಮಾನ 1.5 ಡಿಗ್ರಿ ಸೆಲ್ಸಿಯನ್​ ಏರಿಕೆಯಾಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.