ರಾಜೀವ್‌ಗೆ ನೀಡಿದ್ದ ‘ಭಾರತ ರತ್ನ’ ಹಿಂದೆ ಪಡೆಯಲು ದೆಹಲಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

0
1014

1984ರ ಸಿಖ್‌ ನರಮೇಧ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರಿಗೆ ನೀಡಿರುವ ಭಾರತ ರತ್ನ ಗೌರವವನ್ನು ಹಿಂಪಡೆಯುವಂತೆ ಆಗ್ರಹಿಸಿ ದೆಹಲಿ ವಿಧಾನಸಭೆ ಶುಕ್ರವಾರ ನಿರ್ಣಯವೊಂದನ್ನು ಅಂಗೀಕರಿಸಿದೆ.

ಹೊಸದಿಲ್ಲಿ: 1984ರ ಸಿಖ್‌ ನರಮೇಧ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರಿಗೆ ನೀಡಿರುವ ಭಾರತ ರತ್ನ ಗೌರವವನ್ನು ಹಿಂಪಡೆಯುವಂತೆ ಆಗ್ರಹಿಸಿ ದೆಹಲಿ ವಿಧಾನಸಭೆ ಡಿಸೆಂಬರ್ 21 ರ ಶುಕ್ರವಾರ ನಿರ್ಣಯವೊಂದನ್ನು ಅಂಗೀಕರಿಸಿದೆ.

ಆಪ್‌ ಶಾಸಕ ಜರ್ನೈಲ್‌ ಸಿಂಗ್‌ ಮಂಡಿಸಿದ್ದ ನಿರ್ಣಯವನ್ನು ಧ್ವನಿ ಮತದ ಮೂಲಕ ವಿಧಾನಸಭೆ ಅಂಗೀಕರಿಸಿತು. ಮಾನವೀಯತೆ ವಿರುದ್ಧವಾಗಿ ನಡೆಯುವ ಈ ರೀತಿಯ ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಗೃಹಸಚಿವಾಲಯ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ಣಯದಲ್ಲಿ ಆಗ್ರಹಿಸಲಾಗಿದೆ.