ರಾಜ್ಯಸಭೆ ಉಪ ಸಭಾಪತಿಯಾಗಿ N.D.A ಅಭ್ಯರ್ಥಿ ಹರಿವಂಶ್‌ ನಾರಾಯಣ್‌ ಸಿಂಗ್‌ ಆಯ್ಕೆ

0
33

ರಾಜ್ಯಸಭೆಯ ಉಪ ಸಭಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್ ವಿರುದ್ಧ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿ ಜೆಡಿಯು ಸಂಸದ ಹರಿವಂಶ್‌ ನಾರಾಯಣ್‌ ಸಿಂಗ್‌ ಜಯ ಸಾಧಿಸಿದ್ದಾರೆ.

ಹೊಸದಿಲ್ಲಿ: ರಾಜ್ಯಸಭೆಯ ಉಪ ಸಭಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್ ವಿರುದ್ಧ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿ ಜೆಡಿಯು ಸಂಸದ ಹರಿವಂಶ್‌ ನಾರಾಯಣ್‌ ಸಿಂಗ್‌ ಜಯ ಸಾಧಿಸಿದ್ದಾರೆ. 

ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್ 105 ಮತ ಪಡೆದಿದ್ದರೆ, ಎನ್‌ಡಿಎ ಅಭ್ಯರ್ಥಿ ಹರಿವಂಶ್‌ ನಾರಾಯಣ್‌ ಸಿಂಗ್‌ 125 ಮತ ಪಡೆಯುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. 

ಕುರಿಯನ್‌ ಅವರ ನಿವೃತ್ತಿಯಿಂದ ತೆರವಾಗಿರುವ ಈ ಸ್ಥಾನಕ್ಕೆ ಇಂದು ಚುನಾವಣೆಯ ಮುಹೂರ್ತ ನಿಗದಿಯಾಗಿತ್ತು. 

245 ಸದಸ್ಯ ಬಲದ ರಾಜ್ಯಸಭೆಯಲ್ಲಿ ಉಪ ಸಭಾಪತಿಯಾಗಿ ಆಯ್ಕೆಯಾಗಲು ಕನಿಷ್ಠ 123 ಸದಸ್ಯರ ಬೆಂಬಲ ಅಗತ್ಯವಿದೆ. ಆಡಳಿತಾರೂಢ ಬಿಜೆಪಿಗಾಗಲೀ ಪ್ರತಿಪಕ್ಷ ಗಳ ನೇತೃತ್ವ ವಹಿಸಿರುವ ಕಾಂಗ್ರೆಸ್‌ ಬಳಿಯಾಗಲೀ ಅಗತ್ಯ ಸದಸ್ಯರ ಬಲ ಇರದೇ ಇರುವುದರಿಂದ ಚುನಾವಣೆ ತೀವ್ರ ಕುತೂಹಲ ಕೆರಳಿಸಿತ್ತು. 

ರಾಜ್ಯಸಭೆಯ ನೂತನ ಉಪ ಸಭಾಪತಿಯಾಗಿ ಆಯ್ಕೆಯಾಗಿರುವ ಹರಿವಂಶ್‌ ನಾರಾಯಣ್‌ ಸಿಂಗ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದರು.