‘ರೈಸಿಂಗ್ ಕಾಶ್ಮೀರ್‌’ ಸಂಪಾದಕ ಬುಖಾರಿ ಹತ್ಯೆ

0
15

ಖ್ಯಾತ ಪತ್ರಕರ್ತ ಮತ್ತು ‘ರೈಸಿಂಗ್ ಕಾಶ್ಮೀರ್‌’ ಪತ್ರಿಕೆಯ ಸಂಪಾದಕ ಶುಜಾತ್ ಬುಖಾರಿ (50) ಅವರನ್ನು ಅಪರಿಚಿತ ಬಂದೂಕುಧಾರಿಯೊಬ್ಬ ಜೂನ್ 14 ರ ಗುರುವಾರ ಗುಂಡಿಟ್ಟು ಹತ್ಯೆ ಮಾಡಿದ್ದಾನೆ. ಅವರ ಖಾಸಗಿ ಭದ್ರತಾ ಅಧಿಕಾರಿಯೂ ಗುಂಡೇಟಿಗೆ ಬಲಿಯಾಗಿದ್ದಾರೆ.

ಶ್ರೀನಗರ: ಖ್ಯಾತ ಪತ್ರಕರ್ತ ಮತ್ತು ‘ರೈಸಿಂಗ್ ಕಾಶ್ಮೀರ್‌’ ಪತ್ರಿಕೆಯ ಸಂಪಾದಕ ಶುಜಾತ್ ಬುಖಾರಿ (50) ಅವರನ್ನು ಅಪರಿಚಿತ ಬಂದೂಕುಧಾರಿಯೊಬ್ಬ ಜೂನ್ 14 ರ  ಗುರುವಾರ  ಗುಂಡಿಟ್ಟು ಹತ್ಯೆ ಮಾಡಿದ್ದಾನೆ. ಅವರ ಖಾಸಗಿ ಭದ್ರತಾ ಅಧಿಕಾರಿಯೂ ಗುಂಡೇಟಿಗೆ ಬಲಿಯಾಗಿದ್ದಾರೆ.

ಲಾಲ್‌ ಚೌಕದ ಪ್ರೆಸ್ ಕಾಲೊನಿಯಲ್ಲಿರುವ ತಮ್ಮ ಕಚೇರಿಯಿಂದ ಇಫ್ತಾರ್ ಕೂಟವೊಂದರಲ್ಲಿ ಭಾಗವಹಿಸಲು ಹೋಗುತ್ತಿದ್ದಾಗ ಅವರ ಮೇಲೆ ಗುಂಡಿನ ದಾಳಿ ನಡೆದಿದೆ.

ಅಪರಿಚಿತರ ಗುಂಡಿನ ದಾಳಿಗೆ ಒಬ್ಬ ಪೊಲೀಸ್‌ ಕಾನ್‌ಸ್ಟೆಬಲ್‌ ಮತ್ತು ನಾಗರಿಕರೊಬ್ಬರು ಗಾಯಗೊಂಡಿದ್ದಾರೆ. ಅವರ ಸ್ಥಿತಿ ಗಂಭೀರವಿದೆ.

ಬುಖಾರಿ ಅವರು ಹಿಂದೆ ‘ದಿ ಹಿಂದೂ’ ಪತ್ರಿಕೆಗೆ ಕಾಶ್ಮೀರದ ಪ್ರತಿನಿಧಿಯಾಗಿ ಕೆಲಸ ಮಾಡಿದ್ದರು. ಕಣಿವೆ ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸಲು ಶ್ರಮಿಸುತ್ತಿದ್ದರು.