ವಿಜಯ್ ಮಲ್ಯ ಗಡಿಪಾರಿಗೆ ಲಂಡನ್‌ ಕೋರ್ಟ್‌ ಅಸ್ತು, ಭಾರತಕ್ಕೆ ಜಯ

0
495

ಉದ್ಯಮಿ ವಿಜಯ್‌ ಮಲ್ಯ ಅವರನ್ನು ಲಂಡನ್‌ನಿಂದ ಭಾರತಕ್ಕೆ ಗಡಿಪಾರು ಮಾಡಬೇಕು ಎಂಬ ಭಾರತದ ಮನವಿಗೆ ಜಯ ದಕ್ಕಿದೆ. ಭಾರತದ ಬ್ಯಾಂಕ್‌ಗಳಲ್ಲಿ ಸಾವಿರಾರು ಕೋಟಿ ರೂಪಾಯಿ ಸಾಲ ಪಡೆದು ಪರಾರಿಯಾಗಿದ್ದ ಮದ್ಯ ದೊರೆ ವಿಜಯ್‌ ಮಲ್ಯ ಅವರನ್ನು ಹಸ್ತಾಂತರ ಮಾಡಬೇಕೆಂದು ಭಾರತ ಲಂಡನ್‌ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿತ್ತು.

ಲಂಡನ್‌: ಉದ್ಯಮಿ ವಿಜಯ್‌ ಮಲ್ಯ ಅವರನ್ನು ಲಂಡನ್‌ನಿಂದ ಭಾರತಕ್ಕೆ ಗಡಿಪಾರು ಮಾಡಬೇಕು ಎಂಬ ಭಾರತದ ಮನವಿಗೆ ಜಯ ದಕ್ಕಿದೆ.

ಭಾರತದ ಬ್ಯಾಂಕ್‌ಗಳಲ್ಲಿ ಸಾವಿರಾರು ಕೋಟಿ ರೂಪಾಯಿ ಸಾಲ ಪಡೆದು ಪರಾರಿಯಾಗಿದ್ದ ಮದ್ಯ ದೊರೆ ವಿಜಯ್‌ ಮಲ್ಯ ಅವರನ್ನು ಹಸ್ತಾಂತರ ಮಾಡಬೇಕೆಂದು ಭಾರತ ಲಂಡನ್‌ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿತ್ತು.

ಅಗಸ್ಟಾ ವೆಸ್ಟ್‌ಲ್ಯಾಂಡ್‌ ಕಾಪ್ಟರ್‌ ಹಗರಣದಲ್ಲಿ ಮಧ್ಯವರ್ತಿ ಕ್ರಿಶ್ಚಿಯನ್‌ ಮೈಕಲ್‌ ಗಡಿಪಾರಿನ ಯಶಸ್ಸಿನ ನಂತರ ಭಾರತಕ್ಕೆ ಈಗ ಮತ್ತೊಂದು ರಾಜತಾಂತ್ರಿಕ ಗೆಲುವು ದಕ್ಕಿದಂತಾಗಿದೆ.

ಇಲ್ಲಿನ ವೆಸ್ಟ್‌ಮಿನ್‌ಸ್ಟರ್‌ ಮ್ಯಾಜಿಸ್ಪ್ರೇಟ್ಸ್‌ ಕೋರ್ಟ್‌ನಲ್ಲಿ ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿಗಳು ಮಲ್ಯ ಗಡಿಪಾರಿಗೆ ಅನುಮತಿ ನೀಡಿದ್ದಾರೆ.

ಡಿಸೆಂಬರ್ 10 ರ ಸೋಮವಾರ ಭಾರತೀಯ ಕಾಲಮಾನ 5.44ರ ಸಮಯದಲ್ಲಿ ಲಂಡನ್‌ ಕೋರ್ಟ್‌ ತೀರ್ಪು ಪ್ರಕಟಿಸಿತು. 

ತೀರ್ಪು ಪ್ರಶ್ನಿಸಿ ವಿಜಯ್‌ ಮಲ್ಯ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಬಹುದಾಗಿದೆ ಎಂದು ನ್ಯಾಯಮೂರ್ತಿಗಳು ತೀರ್ಪಿನಲ್ಲಿ ತಿಳಿಸಿದ್ದಾರೆ.