ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ಅಕ್ಟೋಬರ್ 3ರಂದು ಚುನಾವಣೆ : ರಾಜ್ಯ ಚುನಾವಣಾ ಆಯೋಗದ ಪ್ರಕಟಣೆ

0
440

ರಾಜ್ಯ ವಿಧಾನಸಭೆಯಿಂದ ಪರಿಷತ್ತಿನ ಮೂರು ಸ್ಥಾನಗಳಿಗೆ ಉಪಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದ್ದು, ಅ.3ಕ್ಕೆ ಚುನಾವಣೆ ನಿಗದಿಯಾಗಿದೆ.

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ಪರಿಷತ್ತಿನ ಮೂರು ಸ್ಥಾನಗಳಿಗೆ ಉಪಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದ್ದು, ಅಕ್ಟೋಬರ್ 3 ಕ್ಕೆ ಚುನಾವಣೆ ನಿಗದಿಯಾಗಿದೆ. 

ಡಿಸಿಎಂ ಡಾ.ಜಿ.ಪರಮೇಶ್ವರ್‌ ಕೊರಟಗೆರೆಯಿಂದ, ಕೆ.ಎಸ್‌.ಈಶ್ವರಪ್ಪ ಶಿವಮೊಗ್ಗದಿಂದ ಹಾಗೂ ವಿ.ಸೋಮಣ್ಣ ಅವರು ಗೋವಿಂದರಾಜನಗರ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಮೇಲ್ಮನೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಈ ಮೂರು ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ. 

ಸೆಪ್ಟೆಂಬರ್ 14 ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ಸೆಪ್ಟೆಂಬರ್ 22 ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದೆ.ಸೆಪ್ಟೆಂಬರ್ 24 ರಂದು ನಾಮಪತ್ರಗಳ ಕ್ರಮಬದ್ಧತೆಯ ಪರಿಶೀಲನೆ ನಡೆಯಲಿದ್ದು, ಅಭ್ಯರ್ಥಿಗಳು ನಾಮಪತ್ರ ವಾಪಸ್‌ ಪಡೆಯಲುಸೆಪ್ಟೆಂಬರ್ 26 ಕೊನೆ ದಿನವಾಗಿದೆ. ಅಕ್ಟೋಬರ್ 3 ರಂದು ಚುನಾವಣೆ ನಡೆಯಲಿದ್ದು, ಅದೇ ದಿನ ಸಂಜೆ ಫಲಿತಾಂಶ ಪ್ರಕಟವಾಗಲಿದೆ. 

ಡಾ.ಜಿ.ಪರಮೇಶ್ವರ್‌ ಹಾಗೂ ಕೆ.ಎಸ್‌.ಈಶ್ವರಪ್ಪ ಸದಸ್ಯತ್ವ ಅವಧಿ ಜೂನ್‌ 30, 2020 ರವರೆಗೆ ಹಾಗೂ ವಿ.ಸೋಮಣ್ಣ ಅವರ ಅವಧಿ ಜೂನ್‌ 14, 2022ರವರೆಗೆ ಇತ್ತು. ಈ ಬಾಕಿ ಅವಧಿಗೆ ಉಪಚುನಾವಣೆ ನಿಗದಿಯಾಗಿದೆ.