ವಿಧಾನಸಭೆ ಸಭಾಧ್ಯಕ್ಷರಾಗಿ ಕೆ.ಆರ್.ರಮೇಶ್‌ ಕುಮಾರ್ ಆಯ್ಕೆ

0
18

ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಪತಿಯಾಗಿ ಶ್ರೀನಿವಾಸಪುರ ಕ್ಷೇತ್ರದ ಶಾಸಕ ಕೆ.ಆರ್.ರಮೇಶ್‌ ಕುಮಾರ್‌ ಆಯ್ಕೆ ಆಗಿದ್ದಾರೆ.

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಪತಿಯಾಗಿ ಶ್ರೀನಿವಾಸಪುರ ಕ್ಷೇತ್ರದ ಶಾಸಕ ಕೆ.ಆರ್.ರಮೇಶ್‌ ಕುಮಾರ್‌ ಆಯ್ಕೆ ಆಗಿದ್ದಾರೆ.

ಬಿಜೆಪಿಯ ಸುರೇಶ್‌ ಕುಮಾರ್‌ ನಾಮಪತ್ರವನ್ನು ವಾಪಸ್ಸು ಪಡೆದಿದ್ದರಿಂದ ರಮೇಶ್‌ ಕುಮಾರ್‌ ಈ ಸ್ಥಾನಕ್ಕೇರುವ ಹಾದಿ ಸುಗಮವಾಗಿತ್ತು.

ಸಿದ್ದರಾಮಯ್ಯರ ಸೂಚನೆ ಮತ್ತು ಜಿ.ಪರಮೇಶ್ವರ್ ಅವರ ಅನುಮೋದನೆಯಂತೆ  ಸಭಾಧ್ಯಕ್ಷರಾಗಿ ರಮೇಶ್‌ ಕುಮಾರ್‌ ಅವರ ಆಯ್ಕೆ ಪ್ರಸ್ತಾಪವನ್ನು ಬೋಪಯ್ಯ ಅವರು ಧ್ವನಿಮತಕ್ಕೆ ಹಾಕಿದರು. ಬಹುತೇಕರಿಂದ ಹೌದು ಎಂಬ ಅಭಿಪ್ರಾಯ ವ್ಯಕ್ತವಾದ್ದರಿಂದ ರಮೇಶ್‌ ಕುಮಾರ್‌ ಆಯ್ಕೆ ಆಗಿರುವುದನ್ನು ಘೋಷಿಸಿದರು.

ನೂತನ ಸಭಾಧ್ಯಕ್ಷರಾದ ಕೆ.ಆರ್.ರಮೇಶ್‌ ಕುಮಾರ್ ಅವರನ್ನು ನಿರ್ಗಮಿತ ಸ್ಪೀಕರ್‌ ಬೋಪಯ್ಯ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ವಿರೋಧ ಪಕ್ಷದ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರು ಅಭಿನಂದಿಸಿದರು