ವಿಶ್ವಸಂಸ್ಥೆಯಲ್ಲಿನ ಅಮೆರಿಕ ರಾಯಭಾರಿ “ನಿಕ್ಕಿ ಹ್ಯಾಲೆ” ರಾಜೀನಾಮೆ

0
535

ವಿಶ್ವಸಂಸ್ಥೆಯಲ್ಲಿನ ಅಮೆರಿಕ ರಾಯಭಾರಿ ನಿಕ್ಕಿ ಹ್ಯಾಲೆ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಈ ಅಚ್ಚರಿಯ ಬೆಳವಣಿಗೆಯನ್ನು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಖಚಿತಪಡಿಸಿದ್ದಾರೆ.

ವಾಷಿಂಗ್ಟನ್: ವಿಶ್ವಸಂಸ್ಥೆಯಲ್ಲಿನ ಅಮೆರಿಕ ರಾಯಭಾರಿ ನಿಕ್ಕಿ ಹ್ಯಾಲೆ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಈ ಅಚ್ಚರಿಯ ಬೆಳವಣಿಗೆಯನ್ನು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಖಚಿತಪಡಿಸಿದ್ದಾರೆ. 
ವರ್ಷಾಂತ್ಯದೊಳಗೆ ಭಾರತ ಸಂಜಾತೆ ನಿಕ್ಕಿ ಹ್ಯಾಲೆ ಟ್ರಂಪ್ ಆಡಳಿತವನ್ನು ತೊರೆಯಲಿದ್ದಾರೆ. ಅವರ ರಾಜೀನಾಮೆ ಪತ್ರವನ್ನು ಟ್ರಂಪ್ ಅಂಗೀಕರಿಸಿದ್ದಾರೆ ಎಂದು ಅಮೆರಿಕ ಮಾಧ್ಯಮ ಫಾಕ್ಸ್ ವರದಿ ಮಾಡಿದೆ. 
ಸೌತ್ ಕರೊಲಿನಾ ಮಾಜಿ ಗವರ್ನರ್ ನಿಕ್ಕಿ ಹ್ಯಾಲೆ ಅವರನ್ನು 2017 ಜನವರಿ ತಿಂಗಳಲ್ಲಿ ಡೋನಾಲ್ಡ್ ಟ್ರಂಪ್, ವಿಶ್ವಸಂಸ್ಥೆಯಲ್ಲಿನ ಅಮೆರಿಕ ರಾಯಭಾರಿ ಆಗಿ ನೇಮಕ ಮಾಡಿದ್ದರು.