ವಿಶ್ವಸಂಸ್ಥೆ ಮಧ್ಯಸ್ಥಿಕೆಗೆ ಪಾಕಿಸ್ತಾನ ಮನವಿ

0
772

ಪುಲ್ವಾಮಾ ದಾಳಿ ನಂತರ ಭಾರತದೊಂದಿಗೆ ಸಂಬಂಧ ಸಂಪೂರ್ಣ ಹದಗೆಟ್ಟಿದ್ದು, ಉಭಯ ದೇಶಗಳ ನಡುವೆ ಮಾತುಕತೆ ಏರ್ಪಡಿಸಲು ವಿಶ್ವಸಂಸ್ಥೆ ಮಧ್ಯಪ್ರವೇಶಿಸಬೇಕು ಎಂದು ಪಾಕಿಸ್ತಾನ ಮನವಿ ಮಾಡಿದೆ.

ಇಸ್ಲಾಮಾಬಾದ್‌ (ಪಿಟಿಐ): ಪುಲ್ವಾಮಾ ದಾಳಿ ನಂತರ ಭಾರತದೊಂದಿಗೆ ಸಂಬಂಧ ಸಂಪೂರ್ಣ ಹದಗೆಟ್ಟಿದ್ದು, ಉಭಯ ದೇಶಗಳ ನಡುವೆ ಮಾತುಕತೆ ಏರ್ಪಡಿಸಲು ವಿಶ್ವಸಂಸ್ಥೆ ಮಧ್ಯಪ್ರವೇಶಿಸಬೇಕು ಎಂದು ಪಾಕಿಸ್ತಾನ ಮನವಿ ಮಾಡಿದೆ. 

ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್‌ ಅವರಿಗೆ ಪಾಕಿಸ್ತಾನ ವಿದೇಶಾಂಗ ಸಚಿವ ಮೊಹಮ್ಮದ್‌ ಖುರೇಶಿ ಈ ಕುರಿತು ಫೆಬ್ರುವರಿ 18 ರ ಸೋಮವಾರ ಪತ್ರ ಕಳುಹಿಸಿದ್ದಾರೆ. 

‘ಇದು ಬಹಳ ತುರ್ತಿನ ವಿಷಯವಾಗಿದೆ. ದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಭಾರತೀಯ ಪಡೆಗಳು ಪಾಕಿಸ್ತಾನದ ಮೇಲೆ ದಾಳಿ ಮಾಡುವ ಭೀತಿ ಇದೆ. ಈ ನಿಟ್ಟಿನಲ್ಲಿ, ಉಭಯ ದೇಶಗಳ ನಡುವಿನ ಸಂಘರ್ಷ ವಾತಾವರಣವನ್ನು ಕಡಿಮೆ ಮಾಡಿ, ಮಾತುಕತೆಗೆ ವೇದಿಕೆ ಸಿದ್ಧಗೊಳಿಸಬೇಕು’ ಎಂದು ಅವರು ವಿಶ್ವಸಂಸ್ಥೆಯನ್ನು ಕೋರಿದ್ದಾರೆ.