ವಿಶ್ವಸಂಸ್ಥೆ ಸಾಮಾನ್ಯ ಅಧಿವೇಶನ ವೇಳೆ ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಚರ್ಚೆ

0
486

ಭಾರತ ಮತ್ತು ಪಾಕಿಸ್ತಾನ ನಡುವಣ ದ್ವಿಪಕ್ಷೀಯ ಸಂಬಂಧ ಮುಂದುವರಿಸಲು ಮಾತುಕತೆಗೆ ಅವಕಾಶ ನೀಡಬೇಕು ಎಂಬ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮನವಿಗೆ ಮನ್ನಣೆ ನೀಡಿರುವ ಭಾರತ, ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಸಂದರ್ಭದಲ್ಲಿ ಮಾತುಕತೆ ನಡೆಸುವುದಾಗಿ ಹೇಳಿದೆ.

ಹೊಸದಿಲ್ಲಿ: ಭಾರತ ಮತ್ತು ಪಾಕಿಸ್ತಾನ ನಡುವಣ ದ್ವಿಪಕ್ಷೀಯ ಸಂಬಂಧ ಮುಂದುವರಿಸಲು ಮಾತುಕತೆಗೆ ಅವಕಾಶ ನೀಡಬೇಕು ಎಂಬ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮನವಿಗೆ ಮನ್ನಣೆ ನೀಡಿರುವ ಭಾರತ, ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಸಂದರ್ಭದಲ್ಲಿ ಮಾತುಕತೆ ನಡೆಸುವುದಾಗಿ ಹೇಳಿದೆ.

ಉಭಯ ರಾಷ್ಟ್ರಗಳ ಮಾತುಕತೆ ಬಗ್ಗೆ ಹೇಳಿಕೆ ನೀಡಿರುವ ಭಾರತೀಯ  ವಿದೇಶಾಂಗ ಸಚಿವಾಲಯ, ಪಾಕ್ ಮನವಿಯ ಮೇರೆಗೆ ಭಾರತ ಮಾತುಕತೆಗೆ ಅವಕಾಶ ಕಲ್ಪಿಸಲಿದೆ. ಉಭಯ ದೇಶಗಳ ವಿದೇಶಾಂಗ ಸಚಿವರು ಮಾತುಕತೆ ನಡೆಸಲಿದ್ದಾರೆ. ಆದರೆ ಇದರಿಂದ ಪಾಕಿಸ್ತಾನ ಬಗೆಗಿನ ಭಾರತದ ದೃಷ್ಟಿಕೋನ ಮತ್ತು ಪಾಕಿಸ್ತಾನದೊಂದಿಗಿನ ಭಾರತದ ವಿದೇಶಾಂಗ ನೀತಿಯಲ್ಲಿ ಯಾವುದೇ ಬದಲಾವಣೆಯಿರುವುದಿಲ್ಲ ಎಂದು ಸ್ಪಷ್ಟಪಡಿಸಿದೆ. 

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಗುರುವಾರ ಹೇಳಿಕೆ ನೀಡಿದ್ದು, ನ್ಯೂಯಾರ್ಕ್‌ನಲ್ಲಿ ಸೂಕ್ತ ಸಂದರ್ಭ ಮತ್ತು ಸಮಯ ನೋಡಿಕೊಂಡು ಪಾಕ್ ಜತೆ ಭಾರತ ಮಾತುಕತೆ ನಡೆಸಲಿದೆ. ಆದರೆ ಯಾವುದೇ ಪ್ರಮುಖ ಕಾರ್ಯಸೂಚಿಯನ್ನು ಈ ಮಾತುಕತೆಗೆ ನಿಗದಿಪಡಿಸಿಲ್ಲ. ಪಾಕ್ ಕೋರಿಕೆಯಂತೆ ಅಲ್ಲಿ ಮಾತುಕತೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ. 

ಪಾಕ್‌ ಪ್ರಧಾನಿ ಇಮ್ರಾನ್ ಖಾನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದಿದ್ದ ಸೆಪ್ಟೆಂಬರ್ 14ರ ದಿನಾಂಕ ಹೊಂದಿದ್ದ ಪತ್ರದಲ್ಲಿ, ಭಾರತ ಜತೆ ಪಾಕಿಸ್ತಾನ ಮಾತುಕತೆಗೆ ಆಸಕ್ತಿ ವ್ಯಕ್ತಪಡಿಸುತ್ತಿದೆ ಎಂದಿದ್ದರು.