ಶಾಲಾ ಶಿಕ್ಷಕರನ್ನು ಅನ್ಯ ಕಾರ್ಯಕ್ಕೆ ಬಳಸಬಾರದು: ದೆಹಲಿ ಹೈಕೋರ್ಟ್

0
789

ಬೋಧನೆ ಹೊರತುಪಡಿಸಿ ಅನ್ಯ ಕಾರ್ಯಗಳಿಗೆ ಶಾಲಾ ಶಿಕ್ಷಕರನ್ನು ನಿಯೋಜಿಸಬಾರದು ಎಂದು ದೆಹಲಿ ಹೈಕೋರ್ಟ್‌ ಹೇಳಿದೆ.

ನವದೆಹಲಿ (ಪಿಟಿಐ): ಬೋಧನೆ ಹೊರತುಪಡಿಸಿ ಅನ್ಯ ಕಾರ್ಯಗಳಿಗೆ ಶಾಲಾ ಶಿಕ್ಷಕರನ್ನು ನಿಯೋಜಿಸಬಾರದು ಎಂದು ದೆಹಲಿ ಹೈಕೋರ್ಟ್‌ ಹೇಳಿದೆ.

ಉಚಿತ ಮತ್ತು ಕಡ್ಡಾಯ ಶಿಕ್ಷಣ (ಆರ್‌ಟಿಇ) ಕಾಯ್ದೆ ಹಾಗೂ ನಿಯಮಾವಳಿಯ ವ್ಯಾಪ್ತಿ ಮೀರಿದ ಕೆಲಸಗಳಿಗೆ  ಶಿಕ್ಷಕರನ್ನು ಬಳಸಿಕೊಳ್ಳಬಾರದು ಎಂದು ಮಹಾನಗರ ಪಾಲಿಕೆಗಳಿಗೆ ಹೈಕೋರ್ಟ್‌ ಸೂಚಿಸಿದೆ.

ದೆಹಲಿ ಮಹಾನಗರ ಪಾಲಿಕೆ ಅಧೀನ ಶಾಲೆಗಳ ಅಖಿಲ ದೆಹಲಿ ಪ್ರಾಥಮಿಕ ಶಿಕ್ಷಕ ಸಂಘ ಶಿಕ್ಷಕರನ್ನು ಹಾಗೂ ಪ್ರಾಚಾರ್ಯರನ್ನು ಅನ್ಯ ಕಾರ್ಯಗಳಿಗೆ ನಿಯೋಜಿಸಲಾಗುತ್ತಿರುವ ಕುರಿತು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.  ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ.ಹರಿ ಶಂಕರ್‌ ಅವರು, ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಕೆಲಸ ಮಹತ್ವದ್ದಾಗಿದೆ. ಶಿಕ್ಷಕರನ್ನು ಬೇರೆ ಕೆಲಸಗಳಿಗೆ ನಿಯೋಜಿಸಿದರೆ ಮಕ್ಕಳು ಶಿಕ್ಷಣದಿಂದ ವಂಚಿತರಾಗುವ ಸಾಧ್ಯತೆ ಇದೆ. ಆದ್ದರಿಂದ ಬೋಧನೆ ಹೊರತುಪಡಿಸಿ ಬೇರೆ ಕೆಲಸಕ್ಕೆ ಅವರನ್ನು ನಿಯೋಜಿಸಬಾರದು ಎಂದು ಆದೇಶಿಸಿದ್ದಾರೆ.