ಶ್ರೀಲಂಕಾ : ಸುಳ್ಳು ಸುದ್ದಿ ಹಬ್ಬಿಸಿದರೆ ಜೈಲು ಶಿಕ್ಷೆ

0
18

ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ಹರಡುವುದನ್ನು ತಡೆಯುವ ಸಲುವಾಗಿ ಶ್ರೀಲಂಕಾ ಸರ್ಕಾರ ಹೊಸ ಕಾನೂನು ರೂಪಿಸಿದೆ. ಸುಳ್ಳು ಸುದ್ದಿ ಹಬ್ಬಿಸುವವರಿಗೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 3.92 ಲಕ್ಷ ರೂ. ದಂಡ ವಿಧಿಸುವ ಅವಕಾಶವಿದೆ.

ಕೊಲಂಬೊ: ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ಹರಡುವುದನ್ನು ತಡೆಯುವ ಸಲುವಾಗಿ ಶ್ರೀಲಂಕಾ ಸರ್ಕಾರ ಹೊಸ ಕಾನೂನು ರೂಪಿಸಿದೆ. ಸುಳ್ಳು ಸುದ್ದಿ ಹಬ್ಬಿಸುವವರಿಗೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 3.92 ಲಕ್ಷ ರೂ. ದಂಡ ವಿಧಿಸುವ ಅವಕಾಶವಿದೆ.

ಏ. 21ರಂದು ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಪೋಟದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣಗಳ ಪ್ರಮಾಣ ಭಾರಿ ಪ್ರಮಾಣದಲ್ಲಿ ಹೆಚ್ಚಾಗಿತ್ತು. ಇದರಿಂದ ಹಲವೆಡೆ ಮುಸ್ಲಿಂ ಸಮುದಾಯದ ಮೇಲೆ ಹಲ್ಲೆಗಳನ್ನೂ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಶ್ರೀಲಂಕಾದಲ್ಲಿ 9 ದಿನಗಳ ಕಾಲ ಸಾಮಾಜಿಕ ಜಾಲತಾಣಗಳಿಗೆ ನಿರ್ಬಂಧ ಹೇರಲಾಗಿತ್ತು. ಇದಾದ ಬಳಿಕ ಶ್ರೀಲಂಕಾ ಸರ್ಕಾರ ನೂತನ ಕಾನೂನು ರೂಪಿಸಿದೆ.

ಸಿಂಗಾಪುರದಲ್ಲಿ ಕಳೆದ ತಿಂಗಳೇ ಜಾರಿ: ಸುಳ್ಳು ಸುದ್ದಿ ಹಬ್ಬಿಸುವುದನ್ನು ತಡೆಯುವುದಕ್ಕೆಂದೇ ಸಿಂಗಾಪುರ ಸರ್ಕಾರ ಏಪ್ರಿಲ್​ನಲ್ಲೇ ಕಾನೂನು ಜಾರಿಗೆ ತಂದಿತ್ತು. ಕಾನೂನು ಉಲ್ಲಂಘಿಸುವವರಿಗೆ 10 ವರ್ಷಗಳ ಜೈಲು ಶಿಕ್ಷೆ ಮತ್ತು ಭಾರಿ ಮೊತ್ತದ ದಂಡ ವಿಧಿಸಲು ಅವಕಾಶವಿದೆ.