ಸಿಎಸ್‌ಇಗೆ ಇಂದಿರಾ ಗಾಂಧಿ ಶಾಂತಿ ಪ್ರಶಸ್ತಿ

0
427

ಪರಿಸರ ಶಿಕ್ಷಣ ಹಾಗೂ ರಕ್ಷಣೆಯಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ, ದೆಹಲಿಯ ವಿಜ್ಞಾನ ಮತ್ತು ಪರಿಸರ ಕೇಂದ್ರವನ್ನು (ಸಿಎಸ್‌ಇ) ಈ ಬಾರಿಯ ಇಂದಿರಾಗಾಂಧಿ ಶಾಂತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ನವದೆಹಲಿ (ಪಿಟಿಐ): ಪರಿಸರ ಶಿಕ್ಷಣ ಹಾಗೂ ರಕ್ಷಣೆಯಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ, ದೆಹಲಿಯ ವಿಜ್ಞಾನ ಮತ್ತು ಪರಿಸರ ಕೇಂದ್ರವನ್ನು (ಸಿಎಸ್‌ಇ) ಈ ಬಾರಿಯ(2018) ಇಂದಿರಾಗಾಂಧಿ ಶಾಂತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ನೇತೃತ್ವದ ಆಯ್ಕೆ ಸಮಿತಿಯು ಈ ನಿರ್ಧಾರ ತೆಗೆದುಕೊಂಡಿದೆ. ಸುಸ್ಥಿರ ಪರಿಸರ ನೀತಿ ಹಾಗೂ ಸಾಮಾಜಿಕ, ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗುವ ಕಾರ್ಯಕ್ರಮಗಳ ರಚನೆ ಮೇಲೆ ಪ್ರಭಾವ ಬೀರಿದ ಅಂಶಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.