ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಹಿರಿಯ ವಕೀಲರಾದ

0
15

ಹಿರಿಯ ವಕೀಲರಾದ ಇಂದು ಮಲ್ಹೋತ್ರಾ ಅವರನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯನ್ನಾಗಿ ನೇಮಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ನವದೆಹಲಿ: ಹಿರಿಯ ವಕೀಲರಾದ ಇಂದು ಮಲ್ಹೋತ್ರಾ ಅವರನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯನ್ನಾಗಿ ನೇಮಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಜನವರಿ 22ರಂದು ಪ್ರಸ್ತುತ ಉತ್ತರಾಖಂಡ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿರುವ ಕೆ.ಎಂ. ಜೋಸೆಫ್‌ ಮತ್ತು ಇಂದು ಮಲ್ಹೋತ್ರಾ ಅವರ ಹೆಸರನ್ನು ಸುಪ್ರೀಂ ಕೋರ್ಟ್‌ ಕೊಲಿಜಿಯಂ ಪದನ್ನೋತಿಗಾಗಿ ಕಾನೂನು ಸಚಿವಾಲಯಕ್ಕೆ ಶಿಫಾರಸು ಮಾಡಿತ್ತು.

ಆದರೆ, ಮಲ್ಹೋತ್ರಾ ಅವರನ್ನು ಮಾತ್ರ ನೇಮಿಸಲು ಸರ್ಕಾರ ಉದ್ದೇಶಿಸಿದ್ದರಿಂದ ಫೆಬ್ರುವರಿ ಮೊದಲ ವಾರದಲ್ಲೇ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿದ್ದರೂ ನಿರ್ಧಾರ ಪ್ರಕಟಿಸಿರಲಿಲ್ಲ.