ಹೃದಯಾಘಾತ: ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ನಿಧನ, ಗಣ್ಯರ ಸಂತಾಪ

0
470

ಕರ್ನಾಟಕ ರಾಜ್ಯ ಸರ್ಕಾರದ ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಅವರು ತೀವ್ರ ಹೃದಯಾಘಾತದಿಂದ ಮಾರ್ಚ್ 22 ರ ಶುಕ್ರವಾರ ಮಧ್ಯಾಹ್ನ ನಿಧನರಾಗಿದ್ದಾರೆ.

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ  ಅವರು ತೀವ್ರ ಹೃದಯಾಘಾತದಿಂದ ಮಾರ್ಚ್ 22 ರ ಶುಕ್ರವಾರ  ಮಧ್ಯಾಹ್ನ ನಿಧನರಾಗಿದ್ದಾರೆ. 

ಹೃದಯಾಘಾತವಾದ ಪರಿಣಾಮ ಅವರನ್ನು ಹುಬ್ಬಳ್ಳಿಯ ಗೋಕುಲ ರಸ್ತೆಯ ಲೈಫ್‌ಲೈನ್‌ ಆಸ್ಪತ್ರೆಗೆ ದಾಖಲಿಸಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಾಕಾರಿಯಾಗದೆ ಅವರು ನಿಧನರಾಗಿದ್ದಾರೆ ಎಂದು ವೈದ್ಯರು ಹುಬ್ಬಳ್ಳಿ ಪದ್ಮರಾಜ ನಗರದ ಮನೆಯಲ್ಲಿ ಕಡತಗಳ ಪರಿಶೀಲನೆ ಮಾಡುತ್ತಿದ್ದರು. ಕಡತಗಳಿಗೆ ಸಹಿ ಮಾಡುತ್ತಿದ್ದಾಗಲೇ ಸಚಿವರಿಗೆ ತೀವ್ರ ಹೃದಯಾಘಾತವಾಗಿದೆ. 

ಅವರಿಗೆ ಮೇಲಿಂದ ಮೇಲೆ ಬಿಪಿ, ಶುಗರ್ ಏರಿಳಿತದ‌ ಪರಿಣಾಮ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಿದ್ದರು.‌‌ ವಿಶ್ರಾಂತಿ ತೆಗೆದುಕೊಳ್ಳುವಂತೆ‌ ವೈದ್ಯರು ಸಲಹೆ ನೀಡಿದ್ದರು. ಶಿವಳ್ಳಿ ಅವರು ಕುಂದಗೋಳ ವಿಧಾನಸಭೆ ಕ್ಷೇತ್ರ ಪ್ರತಿನಿಧಿಸುತ್ತಿದ್ದು,‌ ಮೂರನೇ ಬಾರಿ‌ ಆಯ್ಕೆಯಾಗಿದ್ದರು. 

ಸಚಿವರ ಅಕಾಲಿಕ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಮೈತ್ರಿ ಸರಕಾರದಲ್ಲಿ ಕುರುಬ ಸಮುದಾಯದ ಕೋಟಾ ಅಡಿಯಲ್ಲಿ ಮಂತ್ರಿ ಸ್ಥಾನ ಗಿಟ್ಟಿಸಿದ್ದರು.‌ 

ಫೆಬ್ರವರಿ 4ರಂದು ಕಲುಷಿತ ಆಹಾರ ಸೇವನೆಯಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.