ಹೈಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳಿಗೆ ಬಡ್ತಿ: ಕೊಲಿಜಿಯಂ ಶಿಫಾರಸು

0
207

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಹುದ್ದೆಗೆ ಹೈಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಹುದ್ದೆಗೆ ಹೈಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಪಟ್ನಾ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಎಂ.ಆರ್‌.ಶಾ, ನ್ಯಾಯಮೂರ್ತಿಗಳಾದ ಹೇಮಂತ ಗುಪ್ತಾ (ಮಧ್ಯಪ್ರದೇಶ ಹೈಕೋರ್ಟ್‌), ಆರ್.ಸುಭಾಷ್‌ ರೆಡ್ಡಿ (ಗುಜರಾತ್‌) ಹಾಗೂ ತ್ರಿಪುರ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಜಯ್‌ ರಸ್ತೋಗಿ ಅವರಿಗೆ ಬಡ್ತಿ ನೀಡಲು ಮಂಗಳವಾರ ನಡೆದ ಕೊಲಿಜಿಯಂ ಸಭೆ ನಿರ್ಧರಿಸಿದೆ.

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ, ನ್ಯಾಯಮೂರ್ತಿಗಳಾದ ಮದನ್‌ ಬಿ.ಲೋಕೂರ್, ಕುರಿಯನ್‌ ಜೋಸೆಫ್‌, ಎ.ಕೆ.ಸಿಕ್ರಿ ಹಾಗೂ ಎಸ್‌.ಎ.ಬೊಬ್ಡೆ ಅವರನ್ನು ಒಳಗೊಂಡ ಕೊಲಿಜಿಯಂ ಮಾಡಿರುವ ಈ ಶಿಫಾರಸಿಗೆ ಕೇಂದ್ರ ಸರ್ಕಾರ ಯಾವುದೇ ಆಕ್ಷೇಪ ಮಾಡದಿದ್ದರೆ, ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ಸಂಖ್ಯೆ 28ಕ್ಕೆ ಏರಿಕೆಯಾಗಲಿದೆ. ಸುಪ್ರೀಂ ಕೋರ್ಟ್‌ಗೆ ಮಂಜೂರಾದ ನ್ಯಾಯಮೂರ್ತಿಗಳ ಒಟ್ಟು ಹುದ್ದೆಗಳ ಸಂಖ್ಯೆ 31.