2016-2017 ನೇ ಸಾಲಿನ ಚಾವುಂಡರಾಯ ಪ್ರಶಸ್ತಿ

0
39

ಕನ್ನಡ ಸಾಹಿತ್ಯ ಪರಿಷತ್ತಿನ 2016 ಮತ್ತು 2017 ನೇ ಸಾಲಿನ ’ಚಾವುಂಡರಾಯ ದತ್ತಿ ಪ್ರಶಸ್ತಿ’ ಗೆ ಆಯ್ಕೆ.

ಕನ್ನಡ ಸಾಹಿತ್ಯ ಪರಿಷತ್ತಿನ 2016ನೇ ಸಾಲಿನ ‘ಚಾವುಂಡರಾಯ ದತ್ತಿ ಪ್ರಶಸ್ತಿ’ಗೆ ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ ಅವರು ಭಾಜನರಾಗಿದ್ದಾರೆ.

2017ನೇ ಸಾಲಿನ ಇದೇ ಪ್ರಶಸ್ತಿಗೆ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪದ್ಮಾ ಶೇಖರ್ ಆಯ್ಕೆಯಾಗಿದ್ದಾರೆ. ತಲಾ ₹30,000 ನಗದು ಪುರಸ್ಕಾರ ಮತ್ತು ಸ್ಮರಣಿಕೆಗಳನ್ನು ಈ ಪ್ರಶಸ್ತಿ ಒಳಗೊಂಡಿದೆ.

ವರ್ಷದ ಅತ್ಯುತ್ತಮ ಪ್ರಕಾಶನ ಸಂಸ್ಥೆಗೆ ನೀಡುವ ‘ಅಂಕಿತ ಪುಸ್ತಕ ಪುರಸ್ಕಾರ ದತ್ತಿ ಪ್ರಶಸ್ತಿ’ ಪಲ್ಲವ ಪ್ರಕಾಶನ ಸಂಸ್ಥೆಗೆ ಲಭಿಸಿದೆ. ₹ 35,000 ನಗದು ಪುರಸ್ಕಾರವನ್ನು ಈ ಪ್ರಶಸ್ತಿ ಒಳಗೊಂಡಿದೆ ಎಂದು ಕಸಾಪ ಪ್ರಕಟಣೆ ತಿಳಿಸಿದೆ.