2017 ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ: ಎಚ್.ಎಸ್. ದೊರೆಸ್ವಾಮಿ

0
43

ರಾಜ್ಯ ಸರ್ಕಾರದ 2017ನೇ ಸಾಲಿನ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಭಾಜನರಾಗಿದ್ದಾರೆ.

ಈ ಪ್ರಶಸ್ತಿ ₹ 5 ಲಕ್ಷ ನಗದು ಪುರಸ್ಕಾರ ಒಳಗೊಂಡಿದೆ. ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಅವರ ಅಧ್ಯಕ್ಷತೆಯ ಸಮಿತಿ ದೊರೆಸ್ವಾಮಿ ಅವರನ್ನು ಆಯ್ಕೆ ಮಾಡಿದೆ. ಅ. 2ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡುವರು.

‘ಸಮಾಜಕ್ಕಾಗಿ ಒಂದಷ್ಟು ಕೆಲಸ ಮಾಡಿರುವ ತೃಪ್ತಿ ನನಗಿದೆ. ಸರ್ಕಾರ ಅದನ್ನು ಗುರುತಿಸಿರುವುದು ಸಂತಸದ ವಿಷಯ. ಈ ಪ್ರಶಸ್ತಿಗೆ ಏಳು ಜನ ಅರ್ಜಿ ಹಾಕಿದ್ದರಂತೆ, ನಾನು ಅರ್ಜಿ ಹಾಕಿರಲಿಲ್ಲ. ಆದರೂ ನನ್ನನ್ನು ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದ’ ಎಂದು ದೊರೆಸ್ವಾಮಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.