2018 ರ ಮಹಿಳಾ ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌: ಭಾರತ ಆತಿಥ್ಯ

0
575

ಈ ಬಾರಿಯ ಮಹಿಳಾ ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌ ಟೂರ್ನಿಯನ್ನು ಭಾರತ ಆಯೋಜಿಸಲಿದೆ.

ನವದೆಹಲಿ (ಪಿಟಿಐ): ಈ ಬಾರಿಯ ಮಹಿಳಾ ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌ ಟೂರ್ನಿಯನ್ನು ಭಾರತ ಆಯೋಜಿಸಲಿದೆ.

‘ವಿಶ್ವ ಮಹಿಳಾ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌ ಟೂರ್ನಿಯು 2018 ರ ನವೆಂಬರ್‌ 13ರಿಂದ 25ರವರೆಗೆ ನವದೆಹಲಿಯಲ್ಲಿ ನಡೆಯಲಿದೆ’ ಎಂದು ಅಂತರರಾಷ್ಟ್ರೀಯ ಬಾಕ್ಸಿಂಗ್‌ ಸಂಸ್ಥೆ (ಎಐಬಿಎ)ಯ ಅಧಿಕಾರಿಯೊಬ್ಬರು ಹೇಳಿದ್ದಾರೆ. 

‘ಅಕ್ಟೋಬರ್‌ ಐದರವರೆಗೆ ಬಾಕ್ಸರ್‌ಗಳು ನೋಂದಣಿ ಮಾಡಿಕೊಳ್ಳಬಹುದು’ ಎಂದು ಅವರು ತಿಳಿಸಿದ್ದಾರೆ. 

2006ರಲ್ಲಿ ಭಾರತ ಈ ಟೂರ್ನಿಯ ಆತಿಥ್ಯ ವಹಿಸಿತ್ತು. ಆ ಟೂರ್ನಿಯಲ್ಲಿ ಭಾರತದ ಬಾಕ್ಸರ್‌ಗಳು ಒಟ್ಟು ನಾಲ್ಕು ಚಿನ್ನ, ಮೂರು ಬೆಳ್ಳಿ ಹಾಗೂ ಒಂದು ಕಂಚಿನ ಪದಕಗಳನ್ನು ಜಯಿಸಿದ್ದರು. 

ಐದು ಸಲ ವಿಶ್ವ ಚಾಂಪಿಯನ್‌ ಆಗಿರುವ ಮೇರಿ ಕೋಮ್‌ ಅವರ ಮೇಲೆ ಈ ಬಾರಿಯೂ ನಿರೀಕ್ಷೆ ಹೆಚ್ಚಿದೆ. ಅವರು 2002, 2005, 2006, 2008 ಹಾಗೂ 2010ರಲ್ಲಿ ಅವರು ಚಿನ್ನದ ಸಾಧನೆ 
ಮಾಡಿದ್ದರು.