2019 ನೇ ಸಾಲಿನ ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಪಂಜಾಬ್‌ನ ಅಜಿತ್ ಕೌರ್ ಹಾಗೂ ಗುರುಬಚನ್ ಸಿಂಗ್ ಭುಲ್ಲರ್ ಆಯ್ಕೆ

0
26

ಪಂಜಾಬಿನ ಹೆಸರಾಂತ ಸಾಹಿತಿಗಳಾದ ಅಜಿತ್‌ ಕೌರ್‌ ಮತ್ತು ಗುರುಬಚನ್ ಸಿಂಗ್ ಭುಲ್ಲರ್ ಅವರನ್ನು ಪ್ರಸಕ್ತ 2019 ನೇ ಸಾಲಿನ ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ತೀರ್ಥಹಳ್ಳಿ: ಪಂಜಾಬಿನ ಹೆಸರಾಂತ ಸಾಹಿತಿಗಳಾದ ಅಜಿತ್‌ ಕೌರ್‌ ಮತ್ತು ಗುರುಬಚನ್ ಸಿಂಗ್ ಭುಲ್ಲರ್ ಅವರನ್ನು ಪ್ರಸಕ್ತ 2019 ನೇ ಸಾಲಿನ ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ಈ  ಪ್ರಶಸ್ತಿಯು 5 ಲಕ್ಷ ಮತ್ತು ಬೆಳ್ಳಿ ಪದಕವನ್ನು ಒಳಗೊಂಡಿರುತ್ತದೆ ಎಂದು ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಮ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ತಿಳಿಸಿದ್ದಾರೆ.

ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ಹಂಪ ನಾಗರಾಜಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಇದೇ ನವೆಂಬರ್ 16 ರಂದು ನಡೆದ ಕುವೆಂಪು ರಾಷ್ಟ್ರೀಯ ಪುರಸ್ಕಾರ ಆಯ್ಕೆ ಸಮಿತಿ ಸಭೆಯಲ್ಲಿ ಈ ಇಬ್ಬರೂ ಸಾಹಿತಿಗಳನ್ನು ಆಯ್ಕೆ ಮಾಡಲಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.

ಕುವೆಂಪು ಅವರ ಜನ್ಮದಿನೋತ್ಸವದಂದು (ಡಿಸೆಂಬರ್‌ 29) ಕುಪ್ಪಳಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.