2019 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸುಷ್ಮಾ ಸ್ವರಾಜ್‌

0
220

ಅನಾರೋಗ್ಯದ ಕಾರಣ, 2019ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಆಡಳಿತಾರೂಢ ಬಿಜೆಪಿ ಹಿರಿಯ ನಾಯಕಿ, ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಘೋಷಿಸಿದ್ದಾರೆ.

ನವದೆಹಲಿ (ಪಿಟಿಐ): ಅನಾರೋಗ್ಯದ ಕಾರಣ, 2019ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಆಡಳಿತಾರೂಢ ಬಿಜೆಪಿ ಹಿರಿಯ ನಾಯಕಿ, ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಘೋಷಿಸಿದ್ದಾರೆ.

ಮಧ್ಯಪ್ರದೇಶದ ಇಂದೋರ್‌ನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ವೇಳೆ ಸುಷ್ಮಾ ಅವರು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

‘ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಬಾರದೆಂಬುದು ನನ್ನ ಮನಸ್ಸಿನ ಭಾವನೆ, ಉಳಿದ ವಿಚಾರವನ್ನು ಪಕ್ಷವೇ ನಿರ್ಧರಿಸಲಿದೆ’ ಎಂದು 66 ವಯಸ್ಸಿನ ಸುಷ್ಮಾ ಸ್ವರಾಜ್‌ ಹೇಳಿದ್ದಾರೆ.

ತಾವು ಪ್ರತಿನಿಧಿಸಿದ ಕ್ಷೇತ್ರದಲ್ಲಿ ಹಲವು ಕಾರ್ಯಕ್ರಮಗಳಿಂದ ಅವರು ದೂರವುಳಿದಿದ್ದರು.

ಸಚಿವರ ಗೈರನ್ನು ಪ್ರಶ್ನಿಸಿ ಭಿತ್ತಿಪತ್ರಗಳು ಕಾಣಿಸಿಕೊಂಡಿದ್ದವು. ಈ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಈ ರೀತಿ ಉತ್ತರಿಸಿದ್ದಾರೆ ಎಂದು ವರದಿಯಾಗಿದೆ.

ಪಕ್ಷ ಸುಷ್ಮಾ ಸ್ವರಾಜ್‌ ಅವರನ್ನು ರಾಜ್ಯಸಭೆಯ ಮೂಲಕ ಸಂಸತ್‌ಗೆ ಮರಳಿ ಕರೆತರಲಿದೆ ಎಂದು ಪಕ್ಷದ ಮೂಲಗಳು ಹೇಳಿವೆ.