56 ಗಣ್ಯರಿಗೆ ಪದ್ಮ ಪ್ರಶಸ್ತಿ ಇಂದು

0
704

ದೇಶದ ಪ್ರತಿಷ್ಠಿತ ಪ್ರಶಸ್ತಿ ಪದ್ಮ ಪುರಸ್ಕಾರಕ್ಕೆ ಈ ಬಾರಿ ಆಯ್ಕೆಯಾಗಿರುವ 112 ಮಂದಿ ಸಾಧಕರ ಪೈಕಿ 56 ಗಣ್ಯರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ರಾಷ್ಟ್ರಪತಿ ಭವನದಲ್ಲಿ ಮಾರ್ಚ್ 11 ರ ಸೋಮವಾರ ಪ್ರಶಸ್ತಿ ಪ್ರದಾನ ಮಾಡಿದ್ದಾರೆ

ನವದೆಹಲಿ (ಪಿಟಿಐ): ದೇಶದ ಪ್ರತಿಷ್ಠಿತ ಪ್ರಶಸ್ತಿ ಪದ್ಮ ಪುರಸ್ಕಾರಕ್ಕೆ ಈ ಬಾರಿ ಆಯ್ಕೆಯಾಗಿರುವ 112 ಮಂದಿ ಸಾಧಕರ ಪೈಕಿ 56 ಗಣ್ಯರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ರಾಷ್ಟ್ರಪತಿ ಭವನದಲ್ಲಿ ಸೋಮವಾರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ನಟ ಖಾದರ್‌ ಖಾನ್‌ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ, ಅಕಾಲಿದಳ ನಾಯಕ ಸುಖದೇವ್‌ ಸಿಂಗ್‌ ದಿಂಡ್ಸಾ ಮತ್ತು ಹಿರಿಯ ಪತ್ರಕರ್ತ ಕುಲದೀಪ್‌ ನಯ್ಯರ್‌ ಅವರಿಗೆ ಮರಣೋತ್ತರವಾಗಿ ಪದ್ಮಭೂಷಣ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರದ ರಂಗಕರ್ಮಿ ಬಾಬಾಸಾಹೇಬ್‌ ಪುರಂದರೆ ಯಾನೆ ಬಲ್ವಂತ್‌ ಮೊರೇಶ್ವರ್‌ ಪುರಂದರೆ (ಪದ್ಮವಿಭೂಷಣ), ಬಿಹಾರದ ಹುಕುಂದೇವ್‌ ನಾರಾಯಣ್‌ ಯಾದವ್‌ (ಪದ್ಮಭೂಷಣ), ತಂತ್ರಜ್ಞಾನ ಕ್ಷೇತ್ರ ದೈತ್ಯ ಬಹುರಾಷ್ಟ್ರೀಯ ಕಂಪನಿ ಸಿಸ್ಕೊ ಸಿಸ್ಟಮ್‌ನ ಸಿಇಒ ಜಾನ್‌ ಛೇಂಬರ್ಸ್‌, ಹೆಸರಾಂತ ಡಾನ್ಸರ್‌ ಮತ್ತು ನಟ ಪ್ರಭುದೇವ್‌ (ಪದ್ಮಶ್ರೀ) ಅವರನ್ನೂ ರಾಷ್ಟ್ರಪತಿ ಗೌರವಿಸಲಿದ್ದಾರೆ. ಈ ಸಮಾರಂಭದಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ.

ಮಾರ್ಚ್‌ 16ರಂದು ನಡೆಯುವ ಮತ್ತೊಂದು ಸಮಾರಂಭದಲ್ಲಿ ಉಳಿದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಗಣರಾಜ್ಯೋತ್ಸವದ ಸಂದರ್ಭದಲ್ಲಿ ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರಕಟಿಸಲಾಗಿತ್ತು.