84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ “ಚಂದ್ರಶೇಖರ ಕಂಬಾರ್”​ ಆಯ್ಕೆ

0
1408

2018 ರ ಡಿಸೆಂಬರ್​ನಲ್ಲಿ ಧಾರವಾಡದಲ್ಲಿ ನಡೆಯಲಿರುವ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್​ ಕಂಬಾರ್​ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ರಾಜ್ಯಾಧ್ಯಕ್ಷ ಮನು ಬಳಿಗಾರ್​ ಘೋಷಿಸಿದ್ದಾರೆ.

ಧಾರವಾಡ: 2018 ಡಿಸೆಂಬರ್​ನಲ್ಲಿ ಧಾರವಾಡದಲ್ಲಿ ನಡೆಯಲಿರುವ 84ನೇ  ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್​ ಕಂಬಾರ್​ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ರಾಜ್ಯಾಧ್ಯಕ್ಷ ಮನು ಬಳಿಗಾರ್​ ಘೋಷಿಸಿದ್ದಾರೆ.

ಇಂದು(ಸೆಪ್ಟೆಂಬರ್ 27 ರಂದು) ಗದಗ ನಗರದಲ್ಲಿ ನಡೆದ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಚಂದ್ರಶೇಖರ ಕಂಬಾರ ಅವರನ್ನು ಆಯ್ಕೆ ಮಾಡಲಾಗಿದೆ.  ಸಮ್ಮೇಳನ ಡಿಸೆಂಬರ್.7, 8 ಹಾಗೂ 9ರಂದು ನಡೆಯಲಿದೆ ಎಂದು ಸಭೆಯ ನಂತರದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದ್ದಾರೆ.

ಚಂದ್ರಶೇಖರ್​ ಕಂಬಾರ್​ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರೂ ಆಗಿದ್ದಾರೆ.