84ನೇ ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ ಬದಲು: ಜ.4,5,6ಕ್ಕೆ ನುಡಿ ಜಾತ್ರೆ

0
814

ಜನೇವರಿ 6,7,8ಕ್ಕೆ ನಿಗದಿಯಾಗಿದ್ದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜನೇವರಿ. 4, 5, 6ರಂದು ಆಚರಿಸಲು ನಿರ್ಧರಿಸಲಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಧಾರವಾಡ: ಜನವರಿ 6,7,8ಕ್ಕೆ ನಿಗದಿಯಾಗಿದ್ದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜನೇವರಿ .4,5,6ರಂದು ಆಚರಿಸಲು ನಿರ್ಧರಿಸಲಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

 ಜನೇವರಿ.8ರಂದು ಅಖಿಲ ಭಾರತ ಮಟ್ಟದಲ್ಲಿ ಮುಷ್ಕರ ಇರುವುದರಿಂದ ದಿನಾಂಕ ಬದಲಾವಣೆ ಮಾಡಲಾಗಿದ್ದು ಸಮ್ಮೇಳನ ನಡೆಯಲಿರುವ ಸ್ಥಳವನ್ನು ಜಿಲ್ಲಾಧಿಕಾರಿ ದೀಪಾ ಚೋಳನ್​ ಪರಿಶೀಲಿಸಿದ್ದಾರೆ.

ಧಾರವಾಡದಲ್ಲಿ ನಡೆಯಲಿರುವ 84ನೇ ಕನ್ನಡ ಸಾಹಿತ್ಯ ಸಮ್ಮೇಳನ ಮೊದಲು ನವೆಂಬರ್​ನಲ್ಲಿ ನಿಗದಿಯಾಗಿತ್ತು. ನಂತರ ಡಿಸೆಂಬರ್​ 7,8,9ಕ್ಕೆ ಮುಂದೂಡಲ್ಪಟ್ಟಿತ್ತು. ಅದಾದ ಬಳಿಕ ಮತ್ತೆ ಜನವರಿ 6,7,8ಕ್ಕೆ ಎಂದು ಹೇಳಲಾಗಿತ್ತು. ಈಗ ಮತ್ತೆ ಬದಲಾವಣೆಯಾಗಿದ್ದು ಜನವರಿ 4,5,6ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಒಟ್ಟು ಮೂರು ಬಾರಿ ಸಮ್ಮೇಳನ ದಿನಾಂಕದ ಬದಲಾಗಿದೆ.

ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರ ವಹಿಸಲಿದ್ದಾರೆ.